Asianet Suvarna News Asianet Suvarna News

Mumbai Accident: ಬಾಂದ್ರಾ - ವರ್ಲಿ ಸೀ ಲಿಂಕ್‌ನಲ್ಲಿ ಭೀಕರ ಅಪಘಾತಕ್ಕೆ ಐವರ ಬಲಿ; ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ತಡರಾತ್ರಿ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕದಲ್ಲಿ ಅಪಘಾತದ ಸ್ಥಳದಲ್ಲಿ ವೇಗವಾಗಿ ಬಂದ ಕಾರೊಂದು 3 ಕಾರುಗಳು ಮತ್ತು ಆಂಬ್ಯುಲೆನ್ಸ್ ಅನ್ನು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ.

on camera horrific crash on mumbai bandra worli sea link 5 dead 8 injured ash
Author
First Published Oct 5, 2022, 5:53 PM IST

ಮಹಾರಾಷ್ಟ್ರ ರಾಜಧಾನಿ ಮುಂಬೈನ (Mumbai) ಬಾಂದ್ರಾ-ವರ್ಲಿ ಸೀ ಲಿಂಕ್ (Bandra - Worli Sea Link) ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತದ ಸ್ಥಳಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು 8 ಮಂದಿ ಗಾಯಗೊಂಡಿದ್ದಾರೆ. ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಬಾಂದ್ರಾವನ್ನು ದಕ್ಷಿಣ ಮುಂಬೈನ ವರ್ಲಿಗೆ ಸಂಪರ್ಕಿಸುವ ಸಮುದ್ರ ಸಂಪರ್ಕ ಸೇತುವೆಯ ದಕ್ಷಿಣದ ಭಾಗದಲ್ಲಿರುವ ಪೋಲ್‌ ಸಂಖ್ಯೆ 76 ಮತ್ತು 78 ರ ನಡುವೆ ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

"ಬಾಂದ್ರಾ ವರ್ಲಿ ಸೀ ಲಿಂಕ್ ರಸ್ತೆ ಅಪಘಾತದಲ್ಲಿ ಒಟ್ಟು 13 ಜನರು ಗಾಯಗೊಂಡಿದ್ದರು. ಈ ಪೈಕಿ 5 ಮಂದಿ ಮೃತಪಟ್ಟಿದ್ದು, ಉಳಿದ 8 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು  ತಿಳಿಸಿದೆ. ನಂತರ, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೆ, ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಕಂದಕಕ್ಕೆ ಉರುಳಿದ ಮದ್ವೆ ದಿಬ್ಬಣದ ಬಸ್: 25 ಜನರ ದಾರುಣ ಸಾವು

ಈ ಘಟನೆ ಬಳಿಕ, ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಅಧಿಕಾರಿಗಳು  ಮುಚ್ಚಿದರು. ಇದೇ ವೇಳೆ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ಥರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಸಾಂತ್ವನ ಹೇಳಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ" ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಹಾಗೂ, ಈ ಅಪಘಾತದ ಕುರಿತು ಟ್ವೀಟ್ ಮಾಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, "ಆದಷ್ಟು ಬೇಗ ಗಾಯಾಳುಗಳ ಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.
 

ಇದನ್ನೂ ಓದಿ: Kanpur Road Accident: ಮದ್ಯಪಾನ ಮಾಡಿ ಡ್ರೈವಿಂಗ್‌, ಕಾಲುವೆಗೆ ಬಿದ್ದ ಟ್ರ್ಯಾಕ್ಟರ್‌ಗೆ 26 ಮಂದಿ ಬಲಿ!


ಅಪಘಾತದ ವಿವರ ಹೀಗಿದೆ..
ತಡರಾತ್ರಿ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕದಲ್ಲಿ ಅಪಘಾತದ ಸ್ಥಳದಲ್ಲಿ ವೇಗವಾಗಿ ಬಂದ ಕಾರೊಂದು 3 ಕಾರುಗಳು ಮತ್ತು ಆಂಬ್ಯುಲೆನ್ಸ್ ಅನ್ನು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ನಡೆದ ಈ ಭೀಕರ ಅಪಘಾತ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.

ಆ ಸ್ಥಳದಲ್ಲಿ ಈ ಅಪಘಾತ ಸಂಭವಿಸುವ ಮುನ್ನ ಹಿಂದೆ ಇನ್ನೊಂದು ಅಪಘಾತ ನಡೆದಿತ್ತು. ಈ ಹಿನ್ನೆಲೆ ಆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಸಿದ್ಧತೆ ನಡೆಸುತ್ತಿದ್ದಾಗ ಎರಡನೇ ಅಪಘಾತ ಸಂಭವಿಸಿದೆ. ಹಿಂದಿನ ಅಪಘಾತದ ನಂತರ ಆಂಬ್ಯುಲೆನ್ಸ್ ಮತ್ತು ಬದಿಯಲ್ಲಿ ನಿಂತಿದ್ದ ಇತರ ಕಾರುಗಳಿಗೆ ಕಾರು ಡಿಕ್ಕಿ ಹೊಡೆದಿರುವುದನ್ನು ದೃಶ್ಯಗಳು ತೋರಿಸುತ್ತವೆ.

ಒಬ್ಬ ವ್ಯಕ್ತಿ ಟ್ರಾಫಿಕ್ ಅನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋ ಕ್ಲಿಪ್‌ನಲ್ಲಿ ತೋರಿಸಲಾಗಿದೆ. ಕೊನೆಯ ಕ್ಷಣದಲ್ಲಿ ವೇಗವಾಗಿ ಬಂದ ಕಾರಿನ ವ್ಯಾಪ್ತಿಯಿಂದ ಆತ ಹೊರಗೆ ಜಿಗಿದಿದ್ದು, ಬಚಾವಾಗಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ, ಮಹಿಳೆ ಹಾಗೂ ಸೀ ಲಿಂಕ್ ಉದ್ಯೋಗಿ ಸೇರಿದಂತೆ 13 ಮಂದಿ ಗಾಯಗೊಂಡಿದ್ದರು. ಈ ಪೈಕಿ, ಚಿಕಿತ್ಸೆ ವೇಳೆ ಐವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಇನ್ನು, ಗಾಯಗೊಂಡಿರುವ 6 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಿದ ಬಳಿಕ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಪಘಾತಕ್ಕೀಡಾದ ಎರಡು ಕಾರುಗಳ ಪರಿಸ್ಥಿತಿ ಹೀನಾಯವಾಗಿದೆ ಎಂದು ಫೋಟೋ, ವಿಡಿಯೋ ಮೂಲಕ ಗಮನಿಸಬಹುದು. ನಗರದ ಅತ್ಯಂತ ಉನ್ನತ ಪ್ರದೇಶಗಳಿಗೆ ಪ್ರಯಾಣಿಸುವವರಿಗೆ ಸಮುದ್ರ ಸಂಪರ್ಕವು ಜೀವಸೆಲೆಯಾಗಿದೆ.

Follow Us:
Download App:
  • android
  • ios