ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ತನಿಖೆ ಆರಂಭ
* ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ತನಿಖೆ ಆರಂಭ
* ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ದೂರು ದಾಖಲು
* ಊಟಿ ಮೂಲದ ಪ್ರಕಾಶ್ ಎಂಬಾತ ವಂಚನೆ
ಬೆಂಗಳೂರು, (ಜೂನ್.19): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಊಟಿ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಂಚಕನ ವಿರುದ್ಧ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಊಟಿ ಮೂಲದ ಪ್ರಕಾಶ್ ಎಂಬಾತ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಚೆನ್ನೈ ಹಾಗೂ ಊಟಿಯಲ್ಲಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ. ಕೇಂದ್ರ ಸರ್ಕಾರದ ಟೆಂಡರ್ ಗಳನ್ನು ಕೊಡಿಸುವುದಾಗಿ ಹೇಳಿ ಹಣ ಪಡೆದು ಹಲವರಿಗೆ ಮೋಸ ಮಾಡಿದ್ದಾನೆ.
ಅಪರಾಧ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಚೆನ್ನೈ, ಊಟಿಯ ಲ್ಯಾಂಡ್ ಲಾರ್ಡ್ಸ್, ಕೃಷಿಕರು ಹಾಗೂ ಉದ್ಯಮಿಗಳಿಗೆ ಕಳೆದ ಮೂರು ತಿಂಗಳಿಂದ ಪ್ರಕಾಶ್ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.ವಂಚಕನ ಬಗ್ಗೆ ದೂರು ಬಂದ ಕಾರಣಕ್ಕೆ ಪರಿಶೀಲಿಸಿದಾಗ ಸಚಿವರ ಆಪ್ತ ಅಲ್ಲ ಎಂಬುದು ಗೊತ್ತಾಗಿದೆ.
ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾನೆ. ಇದೀಗ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯ, ಪ್ರಕಾಶ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಾಗರ(ಜೂ.18): ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಜೂ.8ರಂದು ಐಷಾರಾಮಿ ಕಾರಿನಲ್ಲಿ ಜಾನುವಾರು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗ್ರಾಮಾಂತರ ಠಾಣೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ.
ಗ್ರಾಮದಲ್ಲಿ ಹೈಫೈ ಕಾರಿನಲ್ಲಿ ಜಾನುವಾರು ಕಳವು ನಡೆದ ಘಟನೆ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಜಿಲ್ಲಾ ರಕ್ಷಣಾಧಿಕಾರಿ ಲಕ್ಷಿ ್ಮೕಪ್ರಸಾದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಾತೆ ಮಾರ್ಗದರ್ಶನದಲ್ಲಿ, ಸಾಗರ ಪೊಲೀಸ್ ಸಹಾಯಕ ಅಧೀಕ್ಷಕ ರೋಹನ್ ಜಗದೀಶ್, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಪ್ರವೀಣಕುಮಾರ್, ಕಾರ್ಗಲ್ ಠಾಣೆ ಸಬ್ ಇನ್‌ಸ್ಪೆಕ್ಟರ್ ತಿರುಮಲೇಶ್ ನಾಯ್‌್ಕ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.