ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪಿಡಿಒ| ವಿಜಯಪುರ ನಗರದ ಎಸ್‌.ಆರ್‌. ಕಾಲೋನಿಯಲ್ಲಿ ನಡೆದ ಘಟನೆ| ಈ ಸಂಬಂಧ ವಿಜಯಪುರದ ಜಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ವಿಜಯಪುರ(ಸೆ.07): ಅನಾರೋಗ್ಯದಿಂದ ಬಳಲುತ್ತಿದ್ದ ಪಿಡಿಒ ಅಧಿಕಾರಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಎಸ್‌.ಆರ್‌. ಕಾಲೋನಿಯಲ್ಲಿ ನಿನ್ನೆ(ಭಾನುವಾರ) ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯಪುರ ನಗರದ ಮಂಜುನಾಥ ಈರಪ್ಪ ಬ್ಯಾಹಟ್ಟಿ(45) ಆತ್ಮಹತ್ಯೆಗೆ ಮಾಡಿಕೊಂಡ ಪಿಡಿಒ. ಈತ ಬಾಗಲಕೋಟೆ ಜಿಲ್ಲೆಯ ಕಡ್ಲಿಮಟ್ಟಿ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ಬೆಳಗಾವಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ 11 ವರ್ಷದ ಬಾಲಕಿ

ಆತ್ಮಹತ್ಯೆಗೆ ಶರಣಾದ ಮಂಜುನಾಥ ಈರಪ್ಪ ಬ್ಯಾಹಟ್ಟಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಜಯಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅನಾರೋಗ್ಯ ಹೆಚ್ಚಾಗಿದ್ದರಿಂದ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ವಿಜಯಪುರದ ಜಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.