ಭಟ್ಕಳ(ಅ.01):ಚಿನ್ನ ಕಳ್ಳ ಸಾಗಣೆದಾರರು ಒಂದಲ್ಲಾ ಒಂದು ಮಾರ್ಗವನ್ನು ಹುಡುಕುತ್ತಲೇ ಇರುತ್ತಾರೆ. ಕೊರೋನಾ ವೈರಸ್‌ನ ಲಾಭ ಪಡೆದು ಎನ್‌-95 ಫೇಸ್‌ ಮಾಸ್ಕ್‌ನಲ್ಲಿ ಚಿನ್ನವನ್ನು ಕಳ್ಳಸಾಗಣೆ ಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. 

ದುಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ಕರ್ನಾಟಕ ಭಟ್ಕಳದ ನಿವಾಸಿ ಎಂದು ಗುರುತಿಸಲಾಗಿದೆ. ಈತ ಎನ್‌-95 ಮಾಸ್ಕ್‌ನಲ್ಲಿ ಗಾಳಿ ಆಡಲು ಇಟ್ಟಿರುವ ರಂಧ್ರದಲ್ಲಿ 2 ಲಕ್ಷ ರು.ನ 40 ಗ್ರಾಮ್‌ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇತರ ಜಿಲ್ಲೆಯ ಆಸ್ಪತ್ರೆಗಳಲ್ಲಿ ಉತ್ತರ ಕನ್ನಡ ರೋಗಿಗಳಿಗೆ ಚಿಕಿತ್ಸೆ ಸಿಗ್ತಿಲ್ಲ

ಮಾಸ್ಕ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ ಎಂದು ಸುಂಕ ಅಧಿಕಾರಿಗಳು ತಿಳಿಸಿದ್ದಾರೆ.