ಹಾವೇರಿ(ಸೆ.06): ವೇತನ ಬಾರದಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ.  ತಾಯಪ್ಪ ಭೀಮಪ್ಪ ಮಾದರ (42) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. 

ಮೃತ ತಾಯಪ್ಪ ಭೀಮಪ್ಪ ಮಾದರ ಸುಮಾರು ಹತ್ತು ವರ್ಷಗಳಿಂದ ಖಿಲಾರಿ ತಳಿ ಗೋ ಸಂವರ್ಧನಾ ಕೇಂದ್ರದಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.  ಕಳೆದ 5 ತಿಂಗಳಿಂದ ವೇತನ ಬಾರದ ಹಿನ್ನೆಲೆಯಲ್ಲಿ ಮನೆ ನಿರ್ವಹಣೆ ಕಷ್ಟವಾಗಿತ್ತು ಎಂದು ಹೇಳಲಾಗುತ್ತಿದೆ. 

ಮೃತ ಹೆಂಡ್ತಿ ತಿಥಿ ಕಾರ್ಯಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಪತಿ ಶವವಾಗಿ ಪತ್ತೆ

ವೇತನ ಬಾರದಿದ್ದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದ್ದರಿಂದ ತಾಯಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.