ಧಾರವಾಡ(ಮಾ.17): ಕೌಟುಂಬಿಕ ಕಲಹದಿಂದ ಬೇಸತ್ತು ಮದ್ಯದ ಅಮಲಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ ಯಲ್ಲಪ್ಪ ವಗ್ಗರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. 

ಕೆಲ ದಿನಗಳಿಂದ ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಈತ ಕುಡಿದ ಮದ್ಯದ ಅಮಲಿನಲ್ಲಿ ಬಾಗಿಲು ಮುಚ್ಚಿದ್ದ ಅಂಗಡಿಯೊಂದರ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಯುವಕ ಆತ್ಮಹತ್ಯೆ : ಡೆತ್‌ನೋಟ್‌ನಲ್ಲೇನಿತ್ತು..?

ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.