ಬಳ್ಳಾರಿ(ಜು. 06): ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ಪಟ್ಟಣದ ಪುರಸಭೆ ಬಸ್‌ ನಿಲ್ದಾಣದಲ್ಲಿ ಶನಿವಾರ ನಡೆದಿದೆ. 

ಮೃತರನ್ನು ಸಂಡೂರು ನಿವಾಸಿ ಪಾಂಡುರಂಗ ಘೋಟ್ಗೆ (65) ಎಂದು ಗುರು​ತಿ​ಸ​ಲಾ​ಗಿ​ದೆ. ಮೃತರ ಮಗ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಬಸ್‌ ನಿಲ್ದಾಣದ ವೆಂಟಿಲೇಟರ್‌ಗೆ ಬೆಳಗಿನ ಜಾವ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. 

ಪೊಲೀಸರು ಬೈಕ್ ಸೀಜ್ ಮಾಡಿದ್ದಕ್ಕೆ ಬಾಲಕ ಆತ್ಮಹತ್ಯೆ

ಪತ್ನಿ ನೀಡಿದ ದೂರಿನ ಮೇರೆಗೆ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.