Asianet Suvarna News Asianet Suvarna News

ಕಾರಲ್ಲಿ ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪ್ರಕರಣ ದಾಖಲಾಗ್ತಿದ್ದಂತೆ ಆರೋಪಿ ನಾಪತ್ತೆ!

ಅಪ್ರಾಪ್ತ ಬಾಲಕಿಯನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲಿನಲ್ಲಿ ನಡೆದಿದೆ. ಶ್ರೇಯಸ್ ನಾಯ್ಕ್(25) ತಲೆಮರೆಸಿಕೊಂಡಿರುವ ಆರೋಪಿ

POCSO case registered against accused who sexually harassing a minor girl at udupi rav
Author
First Published Jun 2, 2024, 10:49 AM IST

ಉಡುಪಿ (ಜೂ.2): ಅಪ್ರಾಪ್ತ ಬಾಲಕಿಯನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಅಮಾಸೆಬೈಲಿನಲ್ಲಿ ನಡೆದಿದೆ. 

ಶ್ರೇಯಸ್ ನಾಯ್ಕ್(25) ತಲೆಮರೆಸಿಕೊಂಡಿರುವ ಆರೋಪಿ. ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಹಾಲಾಡಿಯ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಾರಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನಂದು ಆರೋಪಿಸಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಆರೋಪಿ. ಸದ್ಯ ಪ್ರಕರಣ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಸಿಬ್ಬಂದಿಯ ಖುಲ್ಲಂ ಖುಲ್ಲಾ ಕಿಸ್ಸಿಂಗ್; ದಾಖಲಾಯ್ತು ಕೇಸ್

ಲೈಂಗಿಕ ಕಿರುಕುಳ: ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವಜಾ

ಉಡುಪಿ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ದೂರು ದಾಖಲಾಗಿದ್ದು, ವೈದ್ಯಾಧಿಕಾರಿಯನ್ನು ವಜಾಗೊಳಿಸಲಾಗಿದೆ.ವೈದ್ಯಾಧಿಕಾರಿ, ಕಳೆದ ಆರು ತಿಂಗಳಿನಿಂದ ತಾಲೂಕು ಆಸ್ಪತ್ರೆಯ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಆರೋಪಿಸಲಾಗಿದೆ.2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್‌ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು. ವೀಡಿಯೋ ಕಾಲ್ ಮಾಡಿಯೂ ಕಿರುಕುಳ ನೀಡುತ್ತಿದ್ದರೆಂದು ಮಹಿಳಾ ವೈದ್ಯೆ ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪ ಹಿನ್ನೆಲೆ ವೈದ್ಯಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ.

Latest Videos
Follow Us:
Download App:
  • android
  • ios