ಪ್ರವೀಣ್ ನೆಟ್ಟಾರು ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

Praveen Nettaru Murder: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಳ್ಳಾರೆ ‌ಪೊಲೀಸರು ಬಂಧಿಸಿದ್ದಾರೆ.  

police arrest two accused in Mangaluru BJP Youth Leader Praveen Nettaru Murder Case mnj

ಮಂಗಳೂರು (ಜು. 28): ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಳ್ಳಾರೆ ‌ಪೊಲೀಸರು ಬಂಧಿಸಿದ್ದಾರೆ. ಸವಣೂರಿನ ಝಾಕೀರ್ ಮತ್ತು ಬೆಳ್ಳಾರೆಯ ಶಪೀಕ್ ಬಂಧಿತರು. ಇಬ್ಬರು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು  ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿದ್ದಾರೆ. 

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿತ್ತು. ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್‌ ನೆಟ್ಟಾರು ಮೃತಪಟ್ಟವರು.

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿತ್ತು. ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್‌ ನೆಟ್ಟಾರು ಮೃತಪಟ್ಟವರು.

ಕೆಲ ದಿನಗಳ ಹಿಂದಷ್ಟೇ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟಯುವಕನೊಬ್ಬನ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು ಆಮಾಯಕನ ಕೊಲೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರಾತ್ರೋರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಮನೆ ನಿರ್ಮಾಣವಾಗಬೇಕಿದ್ದ ಸ್ಥಳದಲ್ಲೇ ಮಗನ ಅಂತ್ಯಸಂಸ್ಕಾರ: ಬೆಳ್ಳಾರೆ ಸಮೀಪದ ನೆಟ್ಟಾರಿನ ಶೇಖರ ಪೂಜಾರಿ ಮತ್ತು ದಂಪತಿಯ ನಾಲ್ವರು ಮಕ್ಕಳಲ್ಲಿ ಕಿರಿಯವನಾದ ಪ್ರವೀಣ್‌ ಮನೆಗೆ ಆಧಾರಸ್ತಂಭವಾಗಬೇಕಿದ್ದ ಯುವಕ. ನಾಲ್ವರು ಮಕ್ಕಳ ಪೈಕಿ ಬಾಕಿ ಮೂವರೂ ಅಕ್ಕಂದಿರು, ಪ್ರವೀಣ್‌ ಏಕಮಾತ್ರ ಪುತ್ರರಾಗಿದ್ದರು.

ಪ್ರವೀಣ್‌ ನೆಟ್ಟಾರು ಹತ್ಯೆಯಿಂದ ಭುಗಿಲೆದ್ದ ಆಕ್ರೋಶ; ಬಿಜೆಪಿ ಕಾರ್ಯಕರ್ತರು ಬೇರೆ ಪಕ್ಷಗಳಿಗೆ ಶಿಫ್ಟ್ ಆಗ್ತಾರಾ?

ಪ್ರವೀಣ್‌ ವಿದ್ಯಾಭ್ಯಾಸದ ಬಳಿಕ ಬೇರೆ ಕಡೆ ಉದ್ಯೋಗ ಮಾಡಿಕೊಂಡಿದ್ದು, ಬಳಿಕ ಚಿಕನ್‌ ಫಾರ್ಮೊಂದರಲ್ಲಿ ಮ್ಯಾನೇಜರ್‌ ಆಗಿದ್ದರು. ಕೆಲವು ಸಮಯದ ಹಿಂದಷ್ಟೇ ಅಕ್ಷಯ ಚಿಕನ್‌ ಫಾಮ್‌ರ್‍ ಎಂಬ ಸ್ವಂತ ಉದ್ಯಮವನ್ನು ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಸ್ಥಾಪಿಸಿದ್ದರು. ಇದರ ಜೊತೆಗೆ ಇನ್ನೋವಾ ಇಟ್ಟುಕೊಂಡು ಟ್ರಾವೆಲ್ಸ್‌ ಕೂಡಾ ನಡೆಸುತ್ತಿದ್ದರು.

ರಾಜಕೀಯ ಪಕ್ಷ ಹಾಗೂ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರೂ ಪರಿಸರದ ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದ ಪ್ರವೀಣ್‌ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಸಮಾಜದ ಬೇರೆ ಬೇರೆ ಘಟನೆಗಳಿಗೆ ತಕ್ಷಣ ಪ್ರತಿಕ್ರಿಯಿಸುತ್ತಿದ್ದರು. ಬಿಲ್ಲವ ಯುವ ವಾಹಿನಿಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ನಾಲ್ಕು ವರ್ಷಗಳ ಹಿಂದೆ ನೆಟ್ಟಾರಿನ ತಮ್ಮ ಮನೆಯ ಸಮೀಪವೇ ಹೊಸ ಮನೆ ಕಟ್ಟಲು ಮಣ್ಣು ಸಮತಟ್ಟು ಮಾಡಲಾಗಿತ್ತು. ಆದರೆ ಮನೆ ಕಟ್ಟುವ ಕಾರ್ಯ ಕೂಡಿ ಬರಲಿಲ್ಲ. ಮದುವೆಯ ಸಂಬಂಧ ಕೂಡಿ ಬಂತು. ಹೀಗಾಗಿ ಹಳೆಯ ಮನೆಯನ್ನೇ ರಿಪೇರಿ ಮಾಡಿಸಿ ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಹೊಸ ಮನೆಗೆಂದು ಸಮತಟ್ಟು ಮಾಡಿದ ಜಾಗದಲ್ಲಿ ಬುಧವಾರ ಪ್ರವೀಣ್‌ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಡೆಸುವಂತಾಯಿತು.

Praveen Nettur Murder Case: ಆತ್ಮರಕ್ಷಣೆಗೆ ಹಿಂದುಗಳ ಕೈಗೆ ತಲ್ವಾರ್‌ ಕೊಡಿ: ಬಿಜೆ​ಪಿ

ಪ್ರವೀಣ್‌ ಪತ್ನಿ ನೂತನ ಅವರು ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಗ್ರಂಥಪಾಲಕಿಯಾಗಿದ್ದಾರೆ. ಹೆಚ್ಚಾಗಿ ಚಿಕನ್‌ ಸೆಂಟರ್‌ನಲ್ಲಿ ಪತಿಯೊಂದಿಗೆ ಪತ್ನಿ ಕೂಡಾ ಇರುತ್ತಿದ್ದರು. ಆದರೆ ಮಂಗಳವಾರದ ಘಟನೆಯ ಸಂದರ್ಭದಲ್ಲಿ ಆಕೆ ಸ್ಥಳದಲ್ಲಿರಲಿಲ್ಲ. ಮನೆ ಮಗನನ್ನು ಕೊಲ್ಲುವ ಬದಲು ನಮ್ಮನ್ನೇ ಕೊಲ್ಲಬಹುದಿತ್ತಲ್ಲ ಎಂದು ತಂದೆ ತಾಯಿ ರೋದಿಸುವ ದೃಶ್ಯ ಕರುಳು ಕಿವುಚುವಂತಿತ್ತು.

Latest Videos
Follow Us:
Download App:
  • android
  • ios