ಆಗಾಗ್ಗೆ ಬೈಯುತ್ತಿದ್ದ ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಮೊಮ್ಮಗನ ಬಂಧನ
ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿ ಸುಪ್ರೀತ್ (23) ಕೊಲೆ ಮಾಡಿದ ಯುವಕ.
ಮೈಸೂರು (ಜೂ.09): ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿ ಸುಪ್ರೀತ್ (23) ಕೊಲೆ ಮಾಡಿದ ಯುವಕ. ಈತ ತನ್ನ ಅಜ್ಜಿ ಸುಲೋಚನಾ (75) ಎಂಬವರನ್ನು ಕೊಲೆಗೈದು, ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ರಟ್ಟಿನ ಡಬ್ಬಕ್ಕೆ ಹಾಕಿ ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರಿಗೆ ತಂದು ಒಂದು ಗುಂಡಿಯಲ್ಲಿ ಹಾಕಿ ಸುಟ್ಟಿದ್ದಾನೆ. ಇತ್ತೀಚೆಗೆ ಅರೆಬೆಂದ ಸ್ಥಿತಿಯಲ್ಲಿ ವೃದ್ಧೆಯೊಬ್ಬರು ಶವ ಪತ್ತೆಯಾದ ಬಗ್ಗೆ ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಬೆನ್ನತ್ತಿದ ಇಲವಾಲ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಜಿ.ಎಸ್. ಸ್ವರ್ಣ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಗಾಗ್ಗೆ ಬೈಯುತ್ತಿದ್ದ ಅಜ್ಜಿಯನ್ನು ಆರೋಪಿ ಸುಪ್ರೀತ್ ತಳ್ಳಿದ್ದಾನೆ. ತಳ್ಳಿದ ರಭಸಕ್ಕೆ ಅಜ್ಜಿ ಬಿದ್ದು ಗಾಯಗೊಂಡಿದ್ದಾರೆ. ಈ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಮೃತಹೇದವನ್ನು ಕೆಆರ್‌ಎಸ್ ಹಿನ್ನೀರಿನಲ್ಲಿ ತಂದು ಸುಟ್ಟು ಹಾಕಿದ್ದಾನೆ. ತನಿಖಾ ತಂಡದಲ್ಲಿ ಇನ್‌ಸ್ಪೆಕ್ಟರ್ ಜಿ.ಎಸ್. ಸ್ವರ್ಣ, ಎಸ್‌ಐ ಸುರೇಶ್ ಬೋಪಣ್ಣ, ಸಿಬ್ಬಂದಿ ರವಿಕುಮಾರ್, ಧರ್ಮ, ಸಿದ್ದವೀರಪ್ಪ, ಪ್ರಕಾಶ್, ಜಗದೀಶ್ ಶೆಟ್ಟಿ, ಆನಂದ್, ಮನೋಹರ್, ಅರುಣೇಶ್, ಮಂಜುನಾಥ್ ಹಾಗೂ ನಿಂಗರಾಜಗೌಡ ಇದ್ದರು. ಪೊಲೀಸರ ಈ ಕಾರ್ಯವನ್ನು ಎಸ್ಪಿ ಸೀಮಾ ಲಾಟ್ಕರ್ ಅಭಿನಂದಿಸಿದ್ದಾರೆ.
ಧಾರವಾಡದಲ್ಲಿ ಮತ್ತೆ ಆರಂಭವಾಯ್ತಾ ಲವ್ ಜಿಹಾದ್: ಮದುವೆ ತಡೆ ಹಿಡಿದ ಬಜರಂಗದಳ ಕಾರ್ಯಕರ್ತರು
ಯುವಕನ ಕೊಲೆ, ಇಬ್ಬರ ಬಂಧನ: ಆಜಾದಪುರ ರಸ್ತೆಯ ಹುಂಡೇಕಾರ ಕಾಲೋನಿ ಹತ್ತಿರ ಜೂ.5ರಂದು ರಾತ್ರಿ 10ರ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ನಡೆದ ಬಿಲಾಲಾಬಾದ್ನ ಬಾಬಾಖಾನ್ ಅಲಿಯಾಸ್ ಉಮೇರಖಾನ್ (25) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಂಡೇಕಾರ ಕಾಲೋನಿಯ ಮೊಹಮ್ಮದ್ ಅಲ್ಲಾಬಕ್ ಅಲಿ ಅಲಿಯಾಸ್ ಸೈಫನ್ (23) ಮತ್ತು ಮೊಹಮ್ಮದ್ ಮಕದೂಮ್ ಅಲಿ (20) ಬಂಧಿತ ಆರೋಪಿಗಳು. ಜೂ.5 ರಂದು ರಾತ್ರಿ 10ರ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಬಿಲಾಲಾಬಾದ್ನ ಬಾಬಾಖಾನ್ ಅಲಿಯಾಸ್ ಉಮೇರಖಾನ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.
ಗೋಹತ್ಯೆ ಹೇಳಿಕೆ: ಸಚಿವ ವೆಂಕಟೇಶ್‌ಗೆ ಕಾಂಗ್ರೆಸ್ ಹೈಕಮಾಂಡ್ ಛೀಮಾರಿ
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಗರ ಉಪ ಪೊಲೀಸ್ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಐ.ಎ.ಚಂದ್ರಪ್ಪ, ಸಬ್ ಅರ್ಬನ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಬೇನಾಳ ಅವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಇನ್ಸಪೆಕ್ಟರ್ ಸತೀಶ ಕಣಿಮೇಶ್ವರ, ಸಿಬ್ಬಂದಿಗಳಾದ ರಾಜು ಟಾಕಳೆ, ಪ್ರಭಾಕರ, ಮಂಜುನಾಥ, ಈರಣ್ಣ, ಕಿಶೋರ, ವಿಶ್ವನಾಥ ಅವರನ್ನೊಳಗೊಂಡ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.