ಹೆಂಡತಿ ಕಾಟಕ್ಕೆ ಬೇಸತ್ತು ಬದುಕು ಅಂತ್ಯಗೊಳಿಸಿದ ಪೊಲೀಸ್ ಕಾನ್ಸ್‌ಸ್ಟೇಬಲ್!

ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಘಟನೆ ನಗರದ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ. ಹೆಡ್ ಕಾನ್ಸಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪೇದೆ ತಿಪ್ಪಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು.
 

Police constable ends life after being fed up with his wifes trouble gvd

ಬೆಂಗಳೂರು (ಡಿ.14): ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಘಟನೆ ನಗರದ ಹುಸಗೂರು ರೈಲ್ವೇ ಗೇಟ್ ಹತ್ತಿರ ನಡೆದಿದೆ. ಹೆಡ್ ಕಾನ್ಸಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪೇದೆ ತಿಪ್ಪಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪೇದೆ, ಡೆತ್ ನೋಟ್ ನಲ್ಲಿ ಹೆಂಡತಿ ಹಾಗೂ ಮಾವನ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಜೊತೆಗೆ ಮಾವ ಯಮನಪ್ಪ ಜೀವ ಬೆದರಿಕೆ ಹಾಕಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ನಿನ್ನೆ ರಾತ್ರಿ (ಶುಕ್ರವಾರ) 10: 45 ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡರಾತ್ರಿ ರೈಲ್ವೆ ಪೋಲಿಸರಿಗೆ ಮಾಹಿತಿ ಸಿಕ್ಕಿದೆ. ಸದ್ಯ  ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ತಿಪ್ಪಣ್ಣ ತಂದೆ ದೂರು ದಾಖಲಿಸಿದ್ದು, ತನ್ನ ಮಗನಿಗೆ ನ್ಯಾಯ ಕೊಡಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಬೈಕ್ ನಲ್ಲಿ ಬಂದು ತಿಪ್ಪಣ್ಣ  ಸೂಸೈಡ್ ಮಾಡಿಕೊಂಡಿದ್ದು, ಘಟನೆ ಸಂಬಂಧ ಬೈಯಪ್ಪನಹಳ್ಳಿ ರೈಲ್ವೇ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ ಎನ್ ಎಸ್ 108 ಅಡಿ ಎಫ್ಐಆರ್ ದಾಖಲಿಸಿ ತನಿಖೆ ಮುಂದಾಗಿರುವ ರೈಲ್ವೆ ಪೋಲಿಸ್ರು, ಡೆತ್ ನೋಟ್ ಆಧರಿಸಿ ಹೆಂಡತಿ ಹಾಗೂ ಮಾವನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸಿ.ವಿ.ರಾಮನ್ ಆಸ್ಪತ್ರೆ ಗೆ ರವಾನಿಸಲಾಗಿದೆ. ಇನ್ನು ಐಡಿಕಾರ್ಡ್ ಹಾಗೂ ಡೆತ್ ನೋಟ್ ಅನ್ನು ತಿಪ್ಪಣ್ಣ ತೆಗೆದುಕೊಂಡು ಹೋಗಿದ್ದರು.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

ಇಬ್ಬರು ಮಕ್ಕಳನ್ನು ಕೊಂದು ಸಾವಿಗೆ ಶರಣಾದ ತಾಯಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ತನ್ನ ಇಬ್ಬರು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಿಗೇಹಳ್ಳಿಯ ಬಾಲಾಜಿ ಲೇಔಟ್ 4ನೇ ಅಡ್ಡರಸ್ತೆ ನಿವಾಸಿ ಕುಸುಮಾ ದಂಪತಿ ಪುತ್ರ ಶ್ರೇಯನಾ (5) ಹಾಗೂ ಪುತ್ರಿ ಚಾರ್ವಿ (2) ಕೊಲೆಯಾದ ದುರ್ವೈವಿಗಳು. ಮಕ್ಕಳ ತಾಯಿ ಕುಸುಮಾ (36) ನೇಣು ಹಾಕಿಕೊಂಡಿದ್ದಾರೆ. ಕೆಲಸ ಮುಗಿಸಿಕೊಂಡು ಬುಧವಾರ ರಾತ್ರಿ ಮೃತಳ ಪತಿ ಮನೆಗೆ ಮರಳಿದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2015ರಲ್ಲಿ ತುಮಕೂರು ಜಿಲ್ಲೆಯ ಸಾಫ್ಟ್‌ವೇರ್ ಉದ್ಯೋಗಿ ಸುರೇಶ್ ಹಾಗೂ ಮತ್ತಿಕೆರೆಯ ಕುಸುಮಾ ಪ್ರೇಮ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ವೈಟ್‌ಫೀಲ್ಡ್ ಹತ್ತಿರದ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಸುರೇಶ್ ಅವರು, ತಮ್ಮ ಕುಟುಂಬದ ಜತೆ ಕೊಡಿಗೇಹಳ್ಳಿಯ ಬಾಲಾಜಿ ಲೇಔಟ್‌ನ ಅಪಾರ್ಟ್‌ಮೆಂಟ್‌ ವಾಸವಾಗಿದ್ದರು. ಮದುವೆ ಬಳಿಕ ದಂಪತಿ ಅನ್ಯೋನ್ಯವಾಗಿಯೇ ಇದ್ದರು. ಆದರೆ, ಇತ್ತೀಚಿಗೆ ಸತಿ-ಪತಿ ಮನಸ್ತಾಪ ಮೂಡಿತ್ತು. ಇದೇ ವಿಚಾರವಾಗಿ ಸುರೇಶ್ ಹಾಗೂ ಕುಸುಮಾ ಜಗಳವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಎಂದಿನಂತೆ ಬುಧವಾರ ಬೆಳಗ್ಗೆ ಸುರೇಶ್ ಕೆಲಸಕ್ಕೆ ತೆರಳಿದ್ದರು. ಆಗ ಮನೆಯಲ್ಲೇ ಇದ್ದ ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಬಳಿಕ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲಸ ಮುಗಿಸಿಕೊಂಡು ರಾತ್ರಿ ಸುರೇಶ್ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.

Latest Videos
Follow Us:
Download App:
  • android
  • ios