ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಇಲ್ಲಿನ ಹೈದರ್‌ಪುರ ಪ್ರದೇಶದಲ್ಲಿ ಮೂವರು ಸಹೋದ್ಯೋಗಿಗಳ ಮೇಲೆ ಪೊಲೀಸ್ ಪೇದೆಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಈ ಅವಘಡದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಪ್ರಾಣ ಬಿಟ್ಟಿದ್ದಾರೆ.
ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಇಲ್ಲಿನ ಹೈದರ್‌ಪುರ ಪ್ರದೇಶದಲ್ಲಿ ಮೂವರು ಸಹೋದ್ಯೋಗಿಗಳ ಮೇಲೆ ಪೊಲೀಸ್ ಪೇದೆಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಈ ಅವಘಡದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಪ್ರಾಣ ಬಿಟ್ಟಿದ್ದಾರೆ.
ದೆಹಲಿಯ ಹೈದರ್‌ಪುರ ಪ್ರದೇಶದಲ್ಲಿನ ವಾಟರ್ ಪ್ಲಾಂಟ್‌ನಲ್ಲಿ ನಿಯೋಜಿಸಲಾದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೋರ್ವ ತನ್ನ ಮೂವರು ಸಿಬ್ಬಂದಿಗೆ ಗುಂಡು ಹಾರಿಸಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಓರ್ವ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತ ಏಕೆ ಈ ಕೃತ್ಯವೆಸಗಿದ ಎಂಬುದು ತಿಳಿದು ಬಂದಿಲ್ಲ.
