*   ಮಂಗಳೂರು ಹೊರವಲಯದ ಮುಲ್ಕಿ ಬಳಿ ನಡೆದ ಫೈರಿಂಗ್‌ *   ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಆರೋಪಿಗಳು*   ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹೊಡೆದ ಪೊಲೀಸರು  

ಮಂಗಳೂರು(ಜೂ.11): ಇಂದು ಬೆಳ್ಳಂ ಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಹೌದು, ಮಂಗಳೂರು ಹೊರವಲಯದ ಮುಲ್ಕಿ ಬಳಿ ರೌಡಿಶೀಟರ್ ರಾಜಾ ಕೊಲೆ ಪ್ರಕರಣದ ಅರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 

ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. 

ಹಾವೇರಿ ಮಹಿಳೆ ಮೇಲಿನ ಶೂಟೌಟ್‌ ಕೇಸ್‌: ಇಬ್ಬರ ಬಂಧನ

ಹೀಗಾಗಿ ಪೊಲೀಸರು ಅರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು ತಗುಲಿದೆ ಅಂತ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.