ರಾಮನಗರ: ಎಸ್ಕೇಪ್‌ಗೆ ಯತ್ನ, ಆರೋಪಿ ಮೇಲೆ ಪೊಲೀಸರ ಫೈರಿಂಗ್
ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಸಂದರ್ಭದಲ್ಲಿ ಆರೋಪಿ ಮತೀನ್ ಕಾಲಿಗೆ ಎರಡು ಸುತ್ತು ಗುಂಡು ಹೊಡೆದ ಡಿವೈಎಸ್ಪಿ ದಿನಕರ್ ಶೆಟ್ಟಿ
ರಾಮನಗರ(ಆ.13): ಕಳ್ಳತನ ಪ್ರಕರಣ ಸಂಬಂಧ ಸ್ಥಳ ಮಹಜರು ವೇಳೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಹೊರ ವಲಯದ ವಡೇರಹಳ್ಳಿಯಲ್ಲಿ ನಡೆದಿದೆ. ನಗರದ ನಾಲಬಂದವಾಡಿ ವಾಸಿ ಮತೀನ್ (20) ಗುಂಡೇಟು ತಿಂದವನು.
ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಮತೀನ್ ಕೊಲೆ ಹಾಗೂ ಕಳ್ಳತನ ಪ್ರಕರಣ ಆರೋಪಿಯಾಗಿದ್ದನು. ಅವನ ಮೇಲೆ ರಾಮನಗರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಮನಗರ: ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ
ಶನಿವಾರ ಸಂಜೆ ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಸಂದರ್ಭದಲ್ಲಿ ಡಿವೈಎಸ್ಪಿ ದಿನಕರ್ ಶೆಟ್ಟಿರವರು ಆರೋಪಿ ಮತೀನ್ ಕಾಲಿಗೆ ಎರಡು ಸುತ್ತು ಗುಂಡು ಹೊಡೆದಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಸುರೇಶ್ ರವರು ಎಫ್‌ಎಸ್‌ಎಲ್ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.