ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ಮೇಲೆ ಫೈರಿಂಗ್
ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಮತ್ತೊಬ್ಬ ಆರೋಪಿ ಸಂತೋಷ್‌ಗೂ ಗಾಯವಾಗಿದೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಫೈರಿಂಗ್ ಮಾಡಲಾಗಿದೆ. ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವೆಂಕಟೇಶ್ಅ ಅವರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.
ಕೋಲಾರ(ಅ.24): ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳನ್ನ ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಹೀಗಾಗಿ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿದೆ. ಮತ್ತೊಬ್ಬ ಆರೋಪಿ ಸಂತೋಷ್‌ಗೂ ಗಾಯವಾಗಿದೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಫೈರಿಂಗ್ ಮಾಡಲಾಗಿದೆ. ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವೆಂಕಟೇಶ್ಅ ಅವರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.
ಬೆಂಗಳೂರು: ಜ್ಯುವೆಲ್ಲರಿ ಶಾಪಲ್ಲಿ ಶೂಟೌಟ್, ಸಿನಿಮೀಯ ಶೈಲಿಯಲ್ಲಿ ಚಿನ್ನ ಕದ್ದು ದರೋಡೆಕೋರರು ಪರಾರಿ..!
ಹಲ್ಲೆ ವೇಳೆ ಇನ್ಸ್‌ಪೆಕ್ಟರ್ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶ್ರೀನಿವಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ಪೈಕಿ ಮೂರು ಜನ ಪ್ರಮುಖ ಆರೋಪಿಗಳ ಬಂಧಿಸಲಾಗಿದೆ.
ರಮೇಶ್ ಕುಮಾರ್ ಅವರ ಅಪ್ಪಟ ಅಭಿಮಾನಿಯಿಂದ ಕೊಲೆ
ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ವೇಣುಗೋಪಾಲ್ ಎದೆ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಟ್ಯಾಟು ಹಾಕಿಸಿಕೊಂಡಿದ್ದಾನೆ. ಆರೋಪಿ ವೇಣುಗೋಪಾಲ್ ಶ್ರೀನಿವಾಸಪುರ ಮಾಜಿ ಶಾಸಕ ರಮೇಶ್ ಕುಮಾರ್ ಮುಖದ ಟ್ಯಾಟು ಹಾಕಿಸಿಕೊಂಡಿದ್ದಾನೆ. ಕೊಲೆಯಾಗಿರುವ ಶ್ರೀನಿವಾಸ್, ರಮೇಶ್ ಕುಮಾರ್ ಅವರ ಬಲಗೈ ಬಂಟನಾಗಿದ್ದನು.