ಉತ್ತರ ಕನ್ನಡ: ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. 

Police personnel committed suicide in kasarakod at uttarakannada rav

ಉತ್ತರ ಕನ್ನಡ (ಫೆ.7) : ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. 

ಮೃತ ಪೊಲೀಸ್ ಸಿಬ್ಬಂದಿಯನ್ನು ರಾಮ ನಾಗೇಶ ಗೌಡ(32) ಎಂದು ಗುರುತಿಸಲಾಗಿದೆ. ಮೃತರು ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದವರಾಗಿದ್ದು, 2017ರ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಪ್ರಾರಂಭಿಸಿದ್ದರು. 

ಆನ್‌ಲೈನ್ ಗೇಮ್ ತೊಡಗಿಸಿಕೊಂಡು ಅವರು ಸಾಲ ಕೂಡಾ ಮಾಡಿಕೊಂಡಿದ್ದರು. ಇದೇ ಸಾಲದ ಭಾದೆಯು ಅವರ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಐದು ದಿನಗಳಿಂದ ಮನೆಯಲ್ಲೂ ಇರದೇ ಇಲಾಖೆಯಲ್ಲಿ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ ಎನ್ನುವ ಮಾಹಿತಿ ತಿಳಿದು‌ಬಂದಿದೆ. 

ಇಂದು ಮುಂಜಾನೆ ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದೆ. ಕೇಸರಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದ್ದು, ಸಮೀಪದಲ್ಲಿ ಬ್ಯಾಗ ಕೂಡ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ಪತ್ರದಲ್ಲಿ ಬರೆದಿದ್ದು, ಮೊಬೈಲ್ ಪರ್ಸ್, ನೈಲಾನ್ ಹಗ್ಗವು ದೊರೆತಿದೆ. 

ಸ್ಥಳಕ್ಕೆ ಹೊನ್ನಾವರ ಪಿಎಸ್‌ಐ ಪ್ರವೀಣ ಕುಮಾರ ಹಾಗೂ ಆರ್.ಎಫ್.ಓ ವಿಕ್ರಂ ರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ..

ಮಂಗಳೂರು: ಕಡಿಮೆ ಅಂಕ ಬಂದದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

Latest Videos
Follow Us:
Download App:
  • android
  • ios