ಚಿದಾನಂದ ಪುಟಗಿ ಎಂಬಾತ ಲಾಡ್ಜ್‌ ಬಾಡಿಗೆ ಪಡೆದು ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ಕಡೆಯಿಂದ ಹೆಣ್ಣು ಮಕ್ಕಳನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬುದು ಪೊಲೀಸರು ನಡೆಸಿದ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 

ಕಲಬುರಗಿ(ಜು.09): ಇಲ್ಲಿನ ಜೇವರ್ಗಿ ಕ್ರಾಸ್‌ನಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶ (ಇಂಡಸ್ಟ್ರಿಯಲ್‌ ಏರಿಯಾ)ದಲ್ಲಿರುವ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆದಿದೆ ಎಂಬ ಮಾಹಿತಿ ಮೇಲೆ ಸ್ಟೇಷನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ವಂದನಾ, ಸಿಬ್ಬಂದಿ ಮಹೇಶ್ವರಿ, ಮಲ್ಲನಗೌಡ, ರಾಘವೇಂದ್ರ ಮತ್ತು ಸಂಗಣ್ಣ ಅವರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮದ ಕರಣಕುಮಾರ ತಂದೆ ಮಾರುತಿ ದೊಡ್ಡಮನಿ ಎಂಬಾತನನ್ನು ವಶಕ್ಕೆ ಪಡೆದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. 

ಚಿದಾನಂದ ಪುಟಗಿ ಎಂಬಾತ ಲಾಡ್ಜ್‌ ಬಾಡಿಗೆ ಪಡೆದು ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ಕಡೆಯಿಂದ ಹೆಣ್ಣು ಮಕ್ಕಳನ್ನು ಕರೆಯಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬುದು ಪೊಲೀಸರು ನಡೆಸಿದ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 

ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯನ್ನ ವೇಶ್ಯಾವಾಟಿಕೆಗೆ ತಳ್ಳಿದ ಧೂರ್ತರು!

ಈ ಸಂಬಂಧ ಲಾಡ್ಜ್‌ ಮಾಲೀಕ ರಾಘವೇಂದ್ರ, ಮ್ಯಾನೇಜರ್‌ ಸಂದೀಪ್‌, ಹೆಣ್ಣು ಮಕ್ಕಳನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಚಿದಾನಂದ ಪುಟಗಿ ವಿರುದ್ಧ ಪ್ರಕರಣ ದಾಖಲಾಗಿದೆ.