ಹಲ್ಲೆಯಾಗುವ ಭೀತಿ: ತುಮಕೂರಿಗೆ ದರ್ಶನ್ ಸಹಚರರ ಶಿಫ್ಟ್ಗೆ ಪೊಲೀಸರ ಮನವಿ
ಪ್ರಕರಣದ ತನಿಖೆ ವೇಳೆ ಕೆಲ ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದು ಇತರೆ ಆರೋಪಿಗಳಿಗೆ ಅಸಮಾಧಾನ ತಂದಿದೆ. ಹೀಗಾಗಿ ಆರೋಪಿಗಳ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಾಗಿರುವ ನಟ ದರ್ಶನ್ ಅಭಿಮಾನಿಗಳು ಹಲ್ಲೆ ನಡೆಸಬಹುದು.
ಬೆಂಗಳೂರು(ಜೂ.23): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲ್ಲೆಯಾಗುವ ಭೀತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳನ್ನು ಸ್ಥಳಾಂತರಿಸುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ವೇಳೆ ಕೆಲ ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದು ಇತರೆ ಆರೋಪಿಗಳಿಗೆ ಅಸಮಾಧಾನ ತಂದಿದೆ. ಹೀಗಾಗಿ ಆರೋಪಿಗಳ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಾಗಿರುವ ನಟ ದರ್ಶನ್ ಅಭಿಮಾನಿಗಳು ಹಲ್ಲೆ ನಡೆಸಬಹುದು.
ರೇಣುಕಾಸ್ವಾಮಿ, ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್‌ಗೆ ಪೊಲೀಸರ ಪ್ರಯತ್ನ
ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಹಲ್ಲೆ ಭೀತಿಗೊಳಗಾಗಿರುವ ಆರೋಪಿಗಳನ್ನು ಸ್ಥಳಾಂತರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಮನವಿ ಮೇರೆಗೆ ಭಾನುವಾರ ಆ ಆರೋಪಿಗಳು ಸ್ಥಳಾಂತರವಾಗಬಹುದು ಎಂದು ತಿಳಿದು ಬಂದಿದೆ.