ಮೈಸೂರು(ಮಾ.14): ಸ್ನಾತಕೋತ್ತರ ಪದವಿ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ(24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿಯಾಗಿದ್ದಾನೆ. 

ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಲಯದ ಬ್ಲಾಕ್1ರ ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣುಬಿಗಿದುಕೊಂಡು ಸಿದ್ದರಾಮೇಶ್ವರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.