ಪ್ರಜ್ವಲ್ ರೇವಣ್ಣಗೆ ವಿಪರೀತ ಬೆನ್ನುನೋವು; ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ಕೊಡಿ
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಕೇಸಿನಲ್ಲಿ ಜೈಲು ಸೇರಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಲಾಗಿದೆ.
ಬೆಂಗಳೂರು (ಜೂ.24): ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನಲ್ಲಿ ಹಲವು ದಿನಗಳಿಂದ ಬೆನ್ನು ನೋವು ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಿ ಅನಾರೋಗ್ಯ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡಬೇಕು ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಹೌದು, ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಚಾರ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಹಾಸನ ಜಿಲ್ಲೆಯಲ್ಲಿ ದಾಖಲಾಗಿವೆ. ಈ ಕೇಸಿನಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗುತ್ತಿದ್ದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಲಯ ಅವರಿಗೆ ಪುನಃ ಜು.8ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮೂರನೇ ಅತ್ಯಾಚಾರ ಪ್ರಕರಣ: ಮತ್ತೆ ಪ್ರಜ್ವಲ್ ನ್ಯಾಯಾಂಗ ಬಂಧನ, ಜುಲೈ 8ರವರೆಗೆ ಪರಪ್ಪನ ಅಗ್ರಹಾರ
ಇದೇ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಬೆನ್ನು ನೋವು ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಅನುಮತಿ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿದರು. ನೀವು ಜೈಲಿನ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು. ಒಂದು ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಜೈಲು ಅಧಿಕಾರಿಗಳು ನಿಮ್ಮ ಮನವಿಯನ್ನು ನಿರಾಕರಿಸಿದರೆ ಇಲ್ಲಿ ಅರ್ಜಿ ಸಲ್ಲಿಸಿ. ಈ ಬಗ್ಗೆ ಆಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು.
ಸಲಿಂಗಕಾಮ ಕೇಸಲ್ಲಿ ಸೂರಜ್ ರೇವಣ್ಣ 8 ದಿನ ಸಿಐಡಿ ವಶಕ್ಕೆ
ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಒಂದು ಕೇಸಿನಲ್ಲಿ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, 2ನೇ ಕೇಸ್‍ನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಜಾಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಧೀಶರು ಆದೇಶವನ್ನು ಜೂ.26ಕ್ಕೆ ಕಾಯ್ದಿರಿಸಿದ್ದಾರೆ. ಇನ್ನು 3ನೇ ಕೇಸಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ವಿಚಾರಣೆ ಮಾಡಲಾಗಿದ್ದು, ಜೂ.8ರವರೆಗೆ ಪುನಃ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಜುಲೈ 8ವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರಲಿದ್ದಾರೆ.