ತುಮಕೂರಿನಲ್ಲಿ ಭೀಕರ ಅಪಘಾತ, ಬಸ್ ಡಿಕ್ಕಿಯಾಗಿ ನಜ್ಜುಗುಜ್ಜಾದ ಕಾರು: ಮಗು ಸೇರಿ 5 ಮಂದಿ ದುರಂತ ಅಂತ್ಯ

ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಐವರು ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

private bus and car accident in Tumakuru highway many killed gow

ತುಮಕೂರು (ಏ.14):  ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಐವರು ಮೃತಪಟ್ಟಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ದುರ್ಘಟನೆ ಸಂಭವಿಸಿತು. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇಮೋವಾ ಕಾರಿಗೆ ಬೆಂಗಳೂರು ಕಡೆಯಿಂದ ತುಮಕೂರಿಕನ ಶಿರಾ ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಈ ದುರಂತ ನಡೆದಿದೆ. 

ಬಸ್ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಕಾರು ಸಂಪೂರ್ಣ ನಜ್ಜುಗುಜ್ಜು  ಆಗಿದ್ದು, ದಂಪತಿ,  ಮಗು ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. 

ಮೃತ ದಂಪತಿಗಳನ್ನು ಗೋವಿದ ನಾಯಕ (58), ತಿಪ್ಪಮ್ಮ, (52)  ಎಂದು ಗುರುತಿಸಲಾಗಿದೆ. ಇನ್ನಿಬ್ಬರ ವಿಳಾಸ ಪತ್ತೆಯಾಗಿಲ್ಲ. ಮೃತ ಗೋವಿದನಾಯಕ ಅವರು ಮೂಲತಃ ಚಳ್ಳಕೆರೆ ತಾಲೂಕಿನ ನಿವಾಸಿಗಳು. ಬೆಂಗಳೂರಿನ ವಿಜಯನಗರದಲ್ಲಿ ತನ್ನ ಪತ್ನಿ ಜೊತೆ ವಾಸವಿದ್ರು. ಬೆಂಗಳೂರಿನಿಂದ ಚಳ್ಳಕೆರೆಗೆ ಇನೋವಾ ಕಾರಿನಲ್ಲಿ ತೆರಳುತ್ತಿದ್ದಾಗ. ಖಾಸಗಿ ಬಸ್ ರಸ್ತೆ ಡಿವೈಡರ್ ಎಗರಿ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ. ದಂಪತಿಗಳಿಬ್ಬರು ಹಾಗೂ ಓರ್ವ ಮಗು, ಸೇರಿ ಐವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ತುಮಕೂರು ಎಎಸ್ ಪಿ ಮರಿಯಪ್ಪ ಹಾಗೂ ಕ್ಯಾತಸಂದ್ರ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ಕದ್ದನೆಂದು ಕೊಂದು ಹಂತಕರೇ ಹುಡುಕೋ ನಾಟಕವಾಡಿದ್ರು, ಫೋನ್‌ನಲ್ಲಿತ್ತು ಕೊಲೆಯ ಲೈವ್

ಕೊಡಗಿನಲ್ಲಿ ಕಾರು- ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಹಸುಗೂಸು ಸೇರಿ ಮಂಡ್ಯ ಮೂಲದ ಆರು ಮಂದಿ ಸಾವು!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದರ್ಘಟನೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯ 6 ಮಂದಿ ಸಾವನ್ನಪ್ಪಿದ್ದಾರೆ.

ಕೊಡಗಿನಲ್ಲಿ ಕಾರು- ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಹಸುಗೂಸು ಸೇರಿ ಮಂಡ್ಯ ಮೂಲದ ಆರು ಮಂದಿ

ಕೊಡಗು ಜಿಲ್ಲೆಯ ಸಂಪಾಜೆ ಪೆಟ್ರೋಲ್ ಬಂಕ್ ಬಳಿ‌ ಇಂದು ಮಧ್ಯಾಹ್ನದ ವೇಳೆ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಇನ್ನು ಎರಡವೂ ವಾಹನಗಳು ತೀವ್ರ ವೇಗವಾಗಿ ಬರುತ್ತಿದ್ದರಿಂದ ಅಪಘಾತದಿಂದ ಕಾರು ಸಂಪುರ್ಣ ನಜ್ಜುಗುಜ್ಜಾಗಿದೆ. ಇನ್ನು ಕಾರಿನಲ್ಲಿ ಒಟ್ಟು 8 ಜನರು ಪ್ರಯಾಣ ಮಾಡುತ್ತಿದ್ದು, ಅದರಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದಂತೆ ಐವರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಆದರೆ, ಮೃತರ ಹೆಸರು ಮತ್ತು ಯಾವ ಉದ್ದೇಶಕ್ಕೆ ಪ್ರಯಾಣ ಮಾಡುತ್ತಿದ್ದರು ಎಂಬುದು ತಿಳಿದುಬಂದಿಲ್ಲ.

Latest Videos
Follow Us:
Download App:
  • android
  • ios