ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ರಸ್ತೆ ಬದಿ ಉರುಳಿಬಿದ್ದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ  ಕುವೆಂಪುನಗರ ಬಳಿ ನಡೆದಿದೆ. 

ಹಾಸನ (ಡಿ.24): ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ರಸ್ತೆ ಬದಿ ಉರುಳಿಬಿದ್ದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕುವೆಂಪುನಗರ ಬಳಿ ನಡೆದಿದೆ. ಕನಕಪುರದಿಂದ ಬುಧವಾರ ಖಾಸಗಿ ಬಸ್‌ನಲ್ಲಿ ಪ್ರವಾಸ ಬಂದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಬಸ್‌ ಪಲ್ಟಿಯಾಗಿದೆ. ಗಾಯಾಳುಗಳಿಗೆ ಹಾಸನದ ಹಿಮ್ಸ್ ಮತ್ತು ಬೇಲೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕನಕಪುರದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸ ಬಂದಿದ್ದರು. ಇನ್ನು ಅಪಘಾತ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿದ್ದು, ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್‌ ಪಲ್ಟಿ: ಶಾಲಾ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದು, ಐವರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಾಗಿಲ್ಲ. ತಾಲೂಕಿನ ಧರ್ಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 55 ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಖಾಸಗಿ ಬಸ್‌ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದರು. 

ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೆ ಬಾಲಕ ಸಾವು

ಗುರುವಾರ ಮುಂಜಾನೆ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತೆರುಳುವ ಮಾರ್ಗ ಮಧ್ಯದಲ್ಲಿ ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಶಾಲಾ ಶಿಕ್ಷಕ ರವಿ ಅವರಿಗೆ ಕೈ ಮೂಳೆ ಮುರಿದಿದ್ದು, 5 ಮಕ್ಕಳಿಗೆ ಗಂಭೀರ ಗಾಯವಾಗಿದೆ. 18 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನೂ ಆಂಬುಲೆನ್ಸ್‌ ಮೂಲಕ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಚನ್ನಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ: ಸ್ಥಳದಲ್ಲೇ 3 ಜನರ ಸಾವು

ಶಾಸಕ ಎಚ್‌.ಪಿ. ಮಂಜುನಾಥ್‌ ಸಹಕಾರ: ವಿಷಯ ತಿಳಿಯುತ್ತಿದ್ದಂತೆ ಹುಣಸೂರಿನ ಶಾಸಕ ಎಚ್‌.ಪಿ. ಮಂಜುನಾಥ್‌ ಅವರು ಅಲ್ಲಿನ ಸ್ಥಳೀಯ ಶಾಸಕರಿಗೆ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಅವರಿಗೆ ಮಾಹಿತಿ ನೀಡಿದ್ದು, ಕೂಡಲೇ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಸೇರಿದಂತೆ ಇತರೆ ಮುಖಂಡರು ಶಿವಮೊಗ್ಗ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲದೆ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದನಿ ಹಾಗೂ ಡಾ. ಪರಪ್ಪ ಬೋನಸ್‌ ನೇತೃತ್ವದಲ್ಲಿ ಎಲ್ಲ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅಲ್ಲಿನ ವೈದ್ಯ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರೊಂದಿಗೆ ನಿರಂತರ ಸಂಪರ್ಕವಿದ್ದೇನೆ ಎಂದು ಶಾಸಕ ಎಚ್‌ಪಿ ಮಂಜುನಾಥ್‌ ತಿಳಿಸಿದ್ದಾರೆ.