ಕಲಬುರಗಿ(ಫೆ.25):  ಸಾಲಗಾರರ ಕಿರುಕುಳದಿಂದ ಬೇಸತ್ತ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಶಂಕರ್ ಬಿರಾದರ್(48) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.  

ಮೃತ ಶಂಕರ್ ಕಲಬುರಗಿ ನಗರದ ವಿವೇಕಾನಂದ ನಗರದ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಶಂಕರ್ ಬಿರಾದರ್ ಕಳೆದ ರಾತ್ರಿ ರಾಮ ಮಂದಿರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಶಂಕರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಹುನಗುಂದ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮೃತ ಶಂಕರ್ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯನ್ನ ಹೊಂದಿದ್ದರು. ಕೋವಿಡ್ ಕಾರಣ ಸಂಸ್ಥೆ ಸಾಕಷ್ಟು ನಷ್ಟದಲ್ಲಿತ್ತು, ಹೀಗಾಗಿ ಶಂಕರ್ ಸಾಲ ಮಾಡಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. 
ಸಾಲಗಾರರ ಕಿರುಕುಳದಿಂದ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.