ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಸಾಂಗವಿ ಬಾರ್ ಅಂಡ್ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ವಿಜಯಪುರ (ಜೂ.14): ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸಾಂಗವಿ ಬಾರ್ ಅಂಡ್ ಲಾಡ್ಜ್‌ನಲ್ಲಿ ಇಬ್ಬರು ಮಹಿಳೆಯರನ್ನು ಅಕ್ರಮವಾಗಿ ಇಟ್ಟುಕೊಂಡು ಹಾಡುಹಗಲೇ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ಮುದ್ದೇಬಿಹಾಳ ಶಹರ ಪೊಲೀಸರು ಯಶಸ್ವಿ ದಾಳಿ ನಡೆಸಿದ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಪಿಐ ಮಹಮ್ಮದ್ ಫಸಿವುದ್ದೀನ್ ಮತ್ತು ಪಿಎಸ್‌ಐ ಸಂಜಯ ತಿಪ್ಪಾರೆಡ್ಡಿ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಬಾಗಲಕೋಟೆ ಮತ್ತು ಚಿಕ್ಕಮಗಳೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಕೆಲವು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಪೊಲೀಸರು ಈ ದಂಧೆಯ ಹಿಂದಿನ ರೂವಾರಿಗಳನ್ನು ಪತ್ತೆಹಚ್ಚಲು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಪರಿಶೀಲನೆ ನಡೆಯುತ್ತಿದೆ.