ಹಾಡಹಗಲೇ ಮಾರ್ಕೆಟ್‌ನಲ್ಲಿ ಕೊಡಲಿಯಿಂದ ಪತ್ನಿ ಕೊಲೆ ಮಾಡಿದ ಪಾಪಿ ಪತಿ: ವಿಡಿಯೋ ವೈರಲ್
ಪಂಜಾಬ್‌ನ ಸಂಗ್ರೂರಿನಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ನಂತರ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದೂ ವರದಿಯಾಗಿದೆ.
ಚಂಡೀಗಢ (ಆಗಸ್ಟ್ 8, 2023): ದೇಶದಲ್ಲಿ ಅಪರಾಧ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇರುತ್ತದೆ. ಇದೇ ರೀತಿ, ಪಂಜಾಬ್‌ನಲ್ಲಿ ಮತ್ತೊಂದು ಅಪರಾಧ ಪ್ರಕರಣ ವರದಿಯಾಗಿದೆ. ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಲ್ಲಿ ಹಾಡಹಗಲೇ ಆಘಾತಕಾರಿ ಪ್ರಕರಣವೊಂದು ನಡೆದಿದ್ದು, ಘಟನೆಯ ವಿಡಿಯೋ ಸಹ ವೈರಲ್ ಆಗಿದೆ.
ಪಂಜಾಬ್‌ನ ಸಂಗ್ರೂರಿನಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ಸಂಗ್ರೂರಿನ ಜನನಿಬಿಡ ಸುನಮ್ ನಗರದ ಮಾರ್ಕೆಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಂಗ್ರೂರ್ ಜಿಲ್ಲೆಯ ಜನನಿಬಿಡ ಮಾರುಕಟ್ಟೆಯ ಮಧ್ಯದಲ್ಲಿ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ನಂತರ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.
ಇದನ್ನು ಓದಿ: Delhi Accident: 2 ಟ್ರಕ್ ನಡುವೆ ಸಿಲುಕಿ ನಜ್ಜುಗುಜ್ಜಾದ ಕಾರು: ಮಹಿಳೆ ಬಲಿ, ಮತ್ತೊಬ್ಬರ ಸ್ಥಿತಿ ಗಂಭೀರ
ಮೃತ ಮಹಿಳೆಯನ್ನು ರಾಜ್ವಿಂದರ್ ಕೌರ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಪ್ರಯೋಜನಕ್ಕೆ ಬರಲಿಲ್ಲ ಎಂದು ತಿಳಿದುಬಂದಿದೆ. ಪತಿ ಗುರ್‌ದಯಾಳ್ ಸಿಂಗ್ ಸಹ ಆಸ್ಪತ್ರೆಗೆ ದಾಖಲಾದಾಗ ಗಂಭೀರ ಸ್ಥಿತಿಯಲ್ಲಿದ್ದ. ಆದರೆ, ಚಿಕಿತ್ಸೆ ಬಳಿಕ ಈತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇವರಿಬ್ಬರನ್ನೂ ಪಟಿಯಾಳಾ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದೂ ತಿಳಿದುಬಂದಿದೆ.
ಪತಿ-ಪತ್ನಿ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿತ್ತು ಎಂದು ವರದಿಯಾಗಿದೆ. ಈ ವಿಚ್ಛೇದನ ಕೇಸ್ ಈ ರೀತಿ ವಿಚಿತ್ರ ತಿರುವು ಪಡೆದುಕೊಂಡಿದ್ದು, ಪತಿ ತನ್ನ ಪತ್ನಿಯನ್ನು ಮಾರುಕಟ್ಟೆಯಲ್ಲಿ ನೋಡಿದ ನಂತರ ಆಕ್ರೋಶಗೊಂಡ ಪತಿ ಮಾರುಕಟ್ಟೆಯ ಮಧ್ಯದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಇನ್ನು, ಪತಿಯಿಂದ ಹಲ್ಲೆಗೊಳಗಾದ ಮಹಿಳೆ ಸಾವಿಗೀಡಾಗಿದ್ದಾಳೆ.
ಇದನ್ನೂ ಓದಿ: ಬಾಲಕಿ ಮೇಲೆ ಗ್ಯಾಂಗ್‌ರೇಪ್ ಮಾಡಿ ಸುಟ್ಟು ಕೊಂದ ಪಾಪಿಗಳು: ಮನನೊಂದ ತಂದೆ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನ
ಇನ್ನೊಂದೆಡೆ, ಪತ್ನಿಯನ್ನು ಕೊಂದ ಬಳಿಕ ಪತಿ ವಿಷ ಸೇವಿಸಿದ್ದು, ತಾನೂ ಸಹ ಜೀವನ ಅಂತ್ಯಗೊಳಿಸಲು ಯತ್ನಿಸಿದ್ದಾನೆ. ಆದರೆ, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ.
ಈ ಮಧ್ಯೆ, ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿರುವ ವ್ಯಕ್ತಿ ಕೈಯಲ್ಲಿ ಆಯುಧ ಹಿಡಿದು ಮಾರುಕಟ್ಟೆಯಲ್ಲಿ ನಿಂತಿರುವ ವಿಡಿಯೋ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತಿ ಕೊಡಲಿ ಹಿಡಿದು ರಸ್ತೆ ಮಧ್ಯದಲ್ಲಿ ನಿಂತಿದ್ದರೆ, ಆರೋಪಿ ಸುತ್ತಲೂ ಜನಸಂದಣಿ ಕಂಡು ಬರುತ್ತಿದೆ.
ಇದನ್ನೂ ಓದಿ: ಕಾಫಿಗೆ ವಿಷ ಹಾಕಿ ಯೋಧನನ್ನು ಕೊಲ್ಲಲು ಯತ್ನಿಸಿದ ಪಾಪಿ ಮಹಿಳೆ: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!
ಮಾರುಕಟ್ಟೆಯಲ್ಲಿ ನೆರೆದಿದ್ದ ಜನಸಮೂಹ ಆರೋಪಿ ಪತಿ ಮೇಲೆ ಇಟ್ಟಿಗೆ ಮತ್ತು ಬಕೆಟ್ ತುಂಬಿದ ನೀರು ತುಂಬಿಸಿ ಆತನತ್ತ ಎಸೆಯುತ್ತಿದ್ದಾರೆ. ಆರೋಪಿಯು ತನ್ನ ಮೇಲೆ ಇಂತಹ ವಸ್ತುಗಳನ್ನು ಎಸೆದಿದ್ದಕ್ಕಾಗಿ ಗುಂಪಿನ ಮೇಲೂ ಕೋಪಗೊಂಡಿದ್ದಾನೆ. ಅಲ್ಲದೆ, ಇಟ್ಟಿಗೆಗಳಿಂದ ಹಲ್ಲೆ ಮಾಡಲು ಯತ್ನಿಸಿದ ಜನರಿಗೂ ಆತ ಕೊಡಲಿ ತೋರಿಸಿ ಬೆದರಿಸುತ್ತಿರುವುದು ಕಂಡುಬಂದಿದೆ. ಪತ್ನಿಯ ಮೃತದೇಹವೂ ರಸ್ತೆಯಲ್ಲೇ ಬಿದ್ದಿರುವುದನ್ನು ಸಹ ವಿಡಿಯೋದಲ್ಲಿ ಕಂಡುಬಂದಿದೆ.
ಇನ್ನು, ಈ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಡೈಲಿ ಒಂದು ಪೆಗ್ ಹಾಕಿದ್ರೂ ನೀವು ಸೇಫಲ್ಲ: ನಿಮ್ಮನ್ನೂ ಕಾಡುತ್ತೆ ‘’ಸೈಲೆಂಟ್ ಕಿಲ್ಲರ್’’!