ಕಳೆದ ವರ್ಷದ ಡಿ.4ರಂದು ಪುಷ್ಪಾ - 2 ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು ಮಹಿಳೆ ಸಾವಿನ ಪ್ರಕರಣದಲ್ಲಿ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ 24 ಜನರ ಹೆಸರು ಪ್ರಸ್ತಾಪಿಸಲಾಗಿದ್ದು, ಚಿತ್ರದ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ಆರೋಪಿ ನಂ.11 ಎಂದು ಉಲ್ಲೇಖ
ಹೈದ್ರಾಬಾದ್: ಕಳೆದ ವರ್ಷದ ಡಿ.4ರಂದು ಪುಷ್ಪಾ - 2 ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು ಮಹಿಳೆ ಸಾವಿನ ಪ್ರಕರಣದಲ್ಲಿ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ 24 ಜನರ ಹೆಸರು ಪ್ರಸ್ತಾಪಿಸಲಾಗಿದ್ದು, ಚಿತ್ರದ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ಆರೋಪಿ ನಂ.11 ಎಂದು ಉಲ್ಲೇಖಿಸಲಾಗಿದೆ.
ಹೈದರಾಬಾದ್‌ನ ಸಂದ್ಯಾ ಥಿಯೇಟರ್‌ನಲ್ಲಿ ನೂಕುನುಗ್ಗಲಿನ ವೇಳೆ ಮಹಿಳೆ ಸಾವನ್ನಪ್ಪಿದ್ದರು
ಹೈದರಾಬಾದ್‌ನ ಸಂದ್ಯಾ ಥಿಯೇಟರ್‌ನಲ್ಲಿ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ - 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಆಗಮಿಸಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನ ವೇಳೆ ರೇವತಿ ಎನ್ನುವ ಮಹಿಳೆ ಸಾವನ್ನಪ್ಪಿ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು.
ತನಿಖೆ ಪೂರ್ಣ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿದ್ದು, ಎಚ್ಚರಿಕೆ ನಡುವೆಯೂ ಶೋ ಆಯೋಜಿಸಿದ್ದಕ್ಕೆ ಅಲ್ಲು ಅರ್ಜುನ್ ಸೇರಿದಂತೆ ಒಟ್ಟು 24 ಮಂದಿಯ ಹೆಸರನ್ನು ಅರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.
ಕಾಲ್ತುಳಿತ ಬಳಿಕ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧನವಾಗಿತ್ತು. ಆ ಬಳಿಕ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು.


