ಪುತ್ತೂರು ನಗರಸಭೆ ಸದಸ್ಯ, ಗಂಜಿಮಠ ಗ್ರಾಪಂ ಸದಸ್ಯ ನೇಣು ಬಿಗಿದು ಆತ್ಮಹತ್ಯೆ!

ನಗರಸಭಾ ಸದಸ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತ ವ್ಯಕ್ತಿ. ವೃತ್ತಿಯಲ್ಲಿ ಚಾಲಕರಾಗಿರುವ ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದು, ಪುತ್ತೂರು ನಗರಸಭೆಯ ಕಬಕ ವಾರ್ಡ್‌ 1ರ ಸದಸ್ಯ.

Puttur municipal councilor Ganjimath village member committed suicide by hanging himself rav

ಪುತ್ತೂರು (ಮಾ.17): ನಗರಸಭಾ ಸದಸ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತ ವ್ಯಕ್ತಿ. ವೃತ್ತಿಯಲ್ಲಿ ಚಾಲಕರಾಗಿರುವ ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದು, ಪುತ್ತೂರು ನಗರಸಭೆಯ ಕಬಕ ವಾರ್ಡ್‌ 1ರ ಸದಸ್ಯ.

ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅವರ ಪತ್ನಿಯು ಪತಿಯ ಮೊಬೈಲ್‌ ಗೆ ಕರೆ ಮಾಡಿದ್ದ ಸಂದರ್ಭದಲ್ಲಿ ಅವರು ಕರೆ ಸ್ವೀಕರಿಸಿಲ್ಲ ಎನ್ನಲಾಗಿದ್ದು, ಪಕ್ಕದ ಮನೆಗೆ ಕರೆ ಮಾಡಿ ಮನೆಗೆ ಹೋಗಿ ನೋಡುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ತಿಳಿದುಬಂದಿತ್ತು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Ramanagara: ಬ್ಯಾಂಕ್‌ ನೋಟಿಸ್‌ಗೆ ಹೆದರಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಗಂಜಿಮಠ: ಗ್ರಾ.ಪಂ. ಸದಸ್ಯ ಆತ್ಮಹತ್ಯೆ

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯ್ತಿಯ ಮೊಗರು 9 ಮತ್ತು 10ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್‌ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.

ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಸಂಬಳ ನೀಡದ್ದಕ್ಕೆ ಆತ್ಮಹತ್ಯೆ, ಶವ ರಹಸ್ಯವಾಗಿ ಸಮಾಧಿ..!

ಬುಧವಾರ ಮಧ್ಯಾಹ್ನದಿಂದ ಸಂದೀಪ್‌ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದ, ಅವಿವಾಹಿತ ಸಂದೀಪ್‌ ಶೆಟ್ಟಿಅವರು ಇನ್ಸೂರೆನ್ಸ್‌ ಏಜೆಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್‌ ತನಿಖೆಯಿಂದ ಬಹಿರಂಗವಾಗಬೇಕಿದೆ. ಈ ಬಗ್ಗೆ ಅವರ ಸಹೋದರ ಚೇತನ್‌ ಶೆಟ್ಟಿಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

Latest Videos
Follow Us:
Download App:
  • android
  • ios