ಬೆಂಗಳೂರು(ಡಿ.25): ಮಾದಕ ವಸ್ತು ಮಾರಾಟ ಆರೋಪ ಹೊತ್ತು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುರುವಾರ ಮತ್ತೆ ಜೈಲಿಗೆ ಮರಳಿದ್ದಾರೆ. 

ಕಳೆದ ಮೂರು ತಿಂಗಳಿಂದ ಜೈಲಿನಲ್ಲಿ ಬಂಧಿತಳಾಗಿರುವ ರಾಗಿಣಿ, ಕೆಲ ದಿನಗಳಿಂದ ಉಸಿರಾಟ ಸಮಸ್ಯೆ ಸೇರಿದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾರಾಗೃಹದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ನಟಿ ಗುಣಮುಖರಾಗಲಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು.

ಜೈಲಲ್ಲಿರುವ ಮಗಳಿಗಾಗಿ ರಾಗಿಣಿ ತಂದೆ ತಾಯಿ ಅಳಲು : ಬೇಲ್‌ಗಾಗಿ ಸರ್ಕಸ್

ವೈದ್ಯಕೀಯ ತಪಾಸಣೆ ಬಳಿಕ ಮತ್ತೆ ವೈದ್ಯರ ಸಲಹೆ ಮೇರೆಗೆ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ರಾಗಿಣಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.