ರಾಯಚೂರು: ಮೇಲಾಧಿಕಾರಿ ಕಿರುಕುಳ? ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಅಕ್ಷರ ದಾಸೋಹ ಅಧಿಕಾರಿ

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ನಡೆದಿದೆ. ಮೌನೇಶ್ ಕಂಬಾರ, ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ

Raichur crime news Akshara dasoha official attempt suicide at Lingsugur rav

ರಾಯಚೂರು (ಜೂ.7): ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ನಡೆದಿದೆ.

ಮೌನೇಶ್ ಕಂಬಾರ, ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಲಿಂಗಸೂಗೂರು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾಗಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನೇಮಕಗೊಂಡಿದ್ದರು. ಆದರೆ ಮೌನೇಶ್‌ ಕಂಬಾರಗೆ ಮೇಲಾಧಿಕಾರಿಗಳು ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಯತ್ನಿಸಿದ್ದಾರೆ. ಕಚೇರಿಯಿಂದ ಒಂದು ದಿನದ ರಜೆ ಪಡೆದು ಮನೆಗೆ ಬಂದಿದ್ದ ಅಧಿಕಾರಿ ಮನೆಯಲ್ಲೇ 40ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾರೆ ಘಟನೆ ತಿಳಿದು ತಕ್ಷಣ ಕುಟುಂಬಸ್ಥರು ಲಿಂಗಸೂಗೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ರವಾನಿಸಲಾಗಿದೆ. ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಮತ್ತೊಬ್ಬ ನೀಟ್‌ ಆಕಾಂಕ್ಷಿಕೋಟದಲ್ಲಿ ಆತ್ಮಹತ್ಯೆ: ಈ ವರ್ಷದ 10ನೇ ಪ್ರಕರಣ

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಲೇ ಇವೆ ಕಳೆದ ತಿಂಗಳಷ್ಟೇ ವಾಲ್ಮೀಕಿ ಅಭಿವೃದ್ಧಿ ಇಲಾಖೆಯ ಅಧಿಕಾರಿ ಅಕ್ರಮ ವರ್ಗಾವಣೆ ವಿಚಾರಕ್ಕೆ ಸಚಿವರು, ಮೇಲಾಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮೇಲಾಧಿಕಾರಿಯ ಕಿರುಕುಳಕ್ಕೆ ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

Latest Videos
Follow Us:
Download App:
  • android
  • ios