* ಲವ್ ಕೇಸರಿ ಮತ್ತು ವಿವಾದಾತ್ಮಕ ಹೇಳಿಕೆ ಪ್ರಕರಣ* ವಿವಾದಾತ್ಮಕ ಹೇಳಿಕೆ ನೀಡಿದ್ದ  ರಾಜಾಚಂದ್ರ ರಾಮನಗೌಡ, ಮಂಜುನಾಥ ಬಾವಿ ಬಂಧನ* ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಬಾವಿ, ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ 

ರಾಯಚೂರು, (ಏ.17): ಲವ್ ಕೇಸರಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಯಚೂರು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಾವಿ ಹಾಗೂ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಅವರನ್ನು ಇಂದು(ಭಾನುವಾರ) ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏಪ್ರಿಲ್ 10 ರಂದು ನಡೆದಿದ್ದ ಶ್ರೀರಾಮನವಮಿಯಂದು ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಲವ್ ಜಿಹಾದ್ ಬದಲು ಲವ್ ಕೇಸರಿ ಟ್ರೆಂಡ್​ಗೆ ಕರೆ ನೀಡಲಾಗಿತ್ತು. ಹಿಂದುಗಳ ಮೇಲೆ ದಾಳಿ ಮಾಡಿದವರನ್ನ ಕೊಚ್ಚಿ ಹಾಕಿ ನಾವೀದ್ದೀವಿ ಎಂದು ರಾಜಾಚಂದ್ರ ಹೇಳಿದ್ದರು. ಅಲ್ಲದೇ ಇದೇ ವೇಳೆ ವೇದಿಕೆ ಮೇಲೆ ಖಡ್ಗ ಪ್ರದರ್ಶಿಸದ್ದರು.

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

ಲವ್ ಜಿಹಾದ್ ಬದಲಿಗೆ ಲವ್ ಕೇಸರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ರಾಜಾಚಂದ್ರ ರಾಮನಗೌಡ, ಮಂಜುನಾಥ್ ಎಂಬವರ ವಿರುದ್ಧ ದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿತ್ತು. ಅನ್ಯ ಧರ್ಮದ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ 153, 153(A), 295(A)ರ ಅಡಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು.

ಮಣಿಕಾಂತ್ ಎಂಬುವವರು ಮತೀಯ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿ, ಅನ್ಯ ಧರ್ಮೀಯರಲ್ಲಿ ಭಯಹುಟ್ಟಿಸುವಂತ ಕಾರ್ಯಕ್ರಮ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಾದಲ್ಲಿ ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವೈದ್ಯಕೀಯ ತಪಾಸಣೆ ಹಾಗೂ ವಿಚಾರಣೆ ನಂತರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.