Breaking: ಶಾಸಕ ಮುನಿರತ್ನಗೆ ಜಾಮೀನು ಮಂಜೂರು
ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆರ್.ಆರ್.ನಗರದ ಶಾಸಕ ಮುನಿರತ್ನಗೆ ಒಂದು ತಿಂಗಳ ಬಳಿಕ ಜಾಮೀನು ದೊರೆತಿದೆ. ಹನಿಟ್ರ್ಯಾಪ್, ಜಾತಿ ನಿಂದನೆ ಮತ್ತು ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿದ್ದ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು (ಅ.15): ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಮುನಿರತ್ನಗೆ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನ ಅವರಿಗೆ ಒಂದು ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ಹನಿಟ್ರ್ಯಾಪ್, ಜಾತಿ ನಿಂದನೆ ಹಾಗೂ ಅತ್ಯಾಚಾರ ಕೇಸ್‌ಅನ್ನು ಅವರ ಮೇಲೆ ಹೊರಿಸಲಾಗಿತ್ತು. ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ರೇಪ್ ಕೇಸ್‌ನಲ್ಲಿ ಪೊಲೀಸರು ಇವರನ್ನು ಬಂಧಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಜಾಮೀನು ಮಂಜೂರು ಮಾಡಿದೆ. ಸೋಮವಾರ ಇದೇ ನ್ಯಾಯಾಲಯ ಅತ್ಯಾಚಾರ ಪ್ರಕರಣದ ಇತರ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಲೋಹಿತ್, ಕಿರಣ್ ಮತ್ತು ಮಂಜುನಾಥ್‌ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿದ್ದರು.
ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 354A, 354C, 376, 506, 504, 120(b), 149, 384, 406, 308 ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಹೊರತುಪಡಿಸಿ, ಇತರ ಆರು ವ್ಯಕ್ತಿಗಳ ವಿರುದ್ಧ ಆರೋಪ ಮಾಡಲಾಗಿತ್ತು. ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಸೇರಿದಂತೆ ಪ್ರಕರಣ ದಾಖಲಾಗಿದೆ.
ಅತ್ಯಾಚಾರ, ಬೆದರಿಕೆ, ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಎಸ್‌ಐಟಿ ವಶಕ್ಕೆ ಸಾಧ್ಯತೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಸೆಪ್ಟೆಂಬರ್ 14 ರಂದು ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಕೋಲಾರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ ನಿಖಿಲ್ ಅವರ ಪ್ರಕಾರ, ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಕೋಲಾರ ಪೊಲೀಸರ ಸಹಾಯದಿಂದ ಬೆಂಗಳೂರು ಪೊಲೀಸರು ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಕೋಲಾರ ಬಳಿ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಎಲ್ಲಾದ್ರೂ ಹೋದ್ರೆ ವಿಕೃತಕಾಮಿ ಮುನಿರತ್ನ ಏಡ್ಸ್ ಪಿನ್ನು ಚುಚ್ಚಿಬಿಡ್ತಾನೋ ಅಂತಾ ಭಯ ಆಗ್ತಿದೆ: ಮೊಹಮ್ಮದ್ ನಲಪಾಡ್