5 ವರ್ಷದ ಕಂದನ ಮೇಲೆ ಸಬ್ ಇನ್ಸ್‌ಪೆಕ್ಟರ್‌ನಿಂದಲೇ ರೇಪ್, ಆಕ್ರೋಶಿತರ ದಾಳಿಗೆ ಪೊಲೀಸ್ ಕಂಗಾಲು!
ರಾಜಸ್ಥಾನ ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ 5 ವರ್ಷದ ಕಂದನ ರೇಪ್ ಮಾಡಿದ ಘಟನೆ ನಡೆದಿದೆ. ಈ ಮಾಹಿತಿ ಹೊರಬರುತ್ತಿದ್ದಂತೆ ಠಾಣೆಗೆ ನುಗ್ಗಿದ ಕುಟಂಬಸ್ಥರು ಹಾಗೂ ಸ್ಥಳೀಯರು ಸಬ್ ಇನ್ಸ್‌ಪೆಕ್ಟರ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ.
ಜೈಪುರ್(ನ.11) ರಾಜಸ್ಥಾನ ವಿಧಾನಸಭಾ ಚುನಾವಣೆ ಒಂದೆಡೆಯಾದರೆ, ಮತ್ತೊಂದೆಡೆ ರಾಜಸ್ಥಾನದ ಕಾನೂನು ಸುವ್ಯವಸ್ಥೆ ಬಹುತೇಕ ಹದಗೆಟ್ಟಿರುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಇದೀಗ ರಾಜಸ್ಥಾನದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್, 5 ವರ್ಷದ ಕಂದನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಪುಟ್ಟ ಕಂದನ ಪುಸಲಾಯಿಸಿ ತನ್ನ ಕೋಣೆಗೆ ಕರೆಯಿಸಿಕೊಂಡ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿದ್ದಾನೆ. ಈ ಮಾಹಿತಿ ಹೊರಬರುತ್ತಿದ್ದಂತೆ ಕುಟುಂಬಸ್ಥರು, ಸ್ಥಳೀಯರು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆರೋಪಿ ಸಬ್ ಇನ್ಸ್‌ಪೆಕ್ಟರ್ ಮೇಲೆ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಆರೋಪಿಯನ್ನು ಮುಕ್ತಿಗೊಳಿಸಿ ಬಂಧಿಸಲಾಗಿದೆ. ಇತ್ತ ಪ್ರತಿಭಟನೆ ತೀವ್ರಗೊಂಡಿದೆ. ಪದೇ ಪದೇ ರಾಜಸ್ಥಾನದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗುತ್ತಿರುವುದನ್ನು ಉಲ್ಲೇಖಿಸಿರುವ ಬಿಜೆಪಿ, ಸಿಎಂ ಅಶೋಕ್ ಗೆಹ್ಲೋಟ್ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಜರಿದಿದೆ.
ಆರೋಪಿ ಭೂಪೇಂದ್ರ ಸಿಂಗ್ ದೌಸಾದ ರಹುವಾ ವಲಯದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. 50 ರೂಪಾಯಿ ಹಾಗೂ ಚಾಕಲೋಟ್ ಆಸೆ ತೋರಿಸಿ 5 ವರ್ಷದ ಹೆಣ್ಣು ಮಗುವನ್ನು ಕೋಣೆಗೆ ಕರೆಯಿಸಿ ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ದಾಖಲಾಗಿದೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ, ಭೂಪೇಂದ್ರ ಸಿಂಗ್ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಇಲ್ಲಿ ಇತರ ಪೊಲೀಸರು ಸಹಕಾರ ನೀಡಿದ್ದಾರೆ. ಇದು ಅತ್ಯಂತ ದುರಂತ ಘಟನೆ. ರಾಜಸ್ಥಾನ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ, ಅದನ್ನು ಕಾಪಾಡುವ ಪೊಲೀಸರೇ ಈ ರೀತಿ ಮಾಡಿದರೆ ಜನಸಾಮಾನ್ಯರ ಗತಿ ಏನು ಎಂದು ಸಂಸದ ಪ್ರಸ್ನಿಸಿದ್ದಾರೆ.
ಶಾಲೆಯ ಟಾಯ್ಲೆಟ್‌ನಲ್ಲಿಯೇ 11 ವರ್ಷದ ವಿದ್ಯಾರ್ಥಿನಿಯ ಇಬ್ಬರು ಶಿಕ್ಷಕರಿಂದ ರೇಪ್!
5 ವರ್ಷದ ಕಂದನ ಮೇಲೆ ಅತ್ಯಾಚಾರ ನಡೆದಿದೆ ಅನ್ನೋ ಮಾಹಿತಿ ಹೊರಬೀಳುತ್ತಿದ್ದಂತೆ ಪೊಲೀಸ್ ಠಾಣೆ ಮುಂದೆ ಜನರು ಜಮಾಯಿಸಿದ್ದಾರೆ. ನೇರವಾಗಿ ಠಾಣೆ ಒಳಗೆ ನುಗ್ಗಿ ಆರೋಪಿ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಹೊರಗೆಳೆದು ತಂದು ಹಿಗ್ಗಾ ಮುಗ್ಗಾ ತಳಿಸಿದ್ದಾರೆ. ನೂರಕ್ಕೂ ಹೆಚ್ಚು ಜನ ಏಕಾಏಕಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಪೊಲೀಸ್ ತೀವ್ರಗಾಯಗೊಂಡಿದ್ದಾರೆ.
ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಪೋಷಕರು ಮಗಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಿದ್ದಾರೆ. ಇತ್ತ ರಾಜಸ್ಥಾನದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಚುನಾವಣೆ ಸನಿಹದಲ್ಲೇ ಪೊಲೀಸ್ ಅಧಾರಿಯೇ ಆರೋಪಿಯಾಗಿರುವುದು ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ.
ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಜಾಮೀನು ಮಂಜೂರು: ಆದ್ರೂ ಬಿಡುಗಡೆ ಭಾಗ್ಯವಿಲ್ಲ