Rameshwaram Cafe Blast case ಹುಬ್ಬಳ್ಳಿಯಲ್ಲಿ ಶಂಕಿತ ಉಗ್ರ ವಶಕ್ಕೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ಸ್ಥಳೀಯ ಪೊಲೀಸರು ನಗರದಲ್ಲಿ ವ್ಯಕ್ತಿಯೊಬ್ಬರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಈತ ಉಗ್ರನೆಂದು ಶಂಕಿಸಲಾಗಿದೆ.
ಹುಬ್ಬಳ್ಳಿ (ಏ.13): ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ಸ್ಥಳೀಯ ಪೊಲೀಸರು ನಗರದಲ್ಲಿ ವ್ಯಕ್ತಿಯೊಬ್ಬರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಈತ ಉಗ್ರನೆಂದು ಶಂಕಿಸಲಾಗಿದೆ. ವ್ಯಕ್ತಿ ಗಣೇಶಪೇಟೆ ನಿವಾಸಿ, ಪತ್ರಕರ್ತ ಚೋಟು ಅಲಿಯಾಸ್ ಮಿರ್ಜಾ ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ದೇಶ ವಿರೋಧಿ ಮತ್ತು ಭಯೋತ್ಪಾದನೆ ಕೃತ್ಯದಲ್ಲಿ ಪಾಲ್ಗೊಳ್ಳುತ್ತಿದ್ದ ಸಂಶಯದ ಮೇಲೆ ಹಾಗೂ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ವ್ಯಕ್ತಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಗೌಪ್ಯಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸ್ಥಳೀಯ ಪೊಲೀಸರು, ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಈ ಕುರಿತು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಕನ್ನಡಪ್ರಭದೊಂದಿಗೆ ಮಾತನಾಡಿ, ಎನ್ಐಎ ತಂಡ ಬಂದಿಲ್ಲ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
Rameshwaram Cafe Blast case: ಕೆಫೆ ಬಾಂಬ್ ಇಟ್ಟ ಮಾಸ್ಟರ್ ಮೈಂಡ್ ಉಗ್ರ ಸೇರಿ ಇಬ್ಬರು ಅರೆಸ್ಟ್
ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ತಡರಾತ್ರಿ ಅವರನ್ನು ಬೆಂಗಳೂರಿಗೆ ಕರೆತರಲಾಯ್ತು. ಇಂದು ನ್ಯಾಯಾಲಯಕ್ಕೆ ಹಾಜರಿಪಡಿಸಲಾಗುತ್ತದೆ.