ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್‌ ಬೆದರಿಕೆ ಸಂದೇಶ

ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ. 

Rameshwaram Cafe style Bomb Threat Message to Mangaluru International Airport grg

ಮಂಗಳೂರು(ಡಿ.04):  ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇರಿಸಿದ್ದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ. 

ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ. 

ಆಂಟಿ ಮೇಲಿನ ದ್ವೇಷಕ್ಕೆ ಏರ್‌ಪೋರ್ಟ್‌ಗೆ ಹುಸಿಬಾಂಬ್ ಕರೆ ಮಾಡಿದ ವ್ಯಕ್ತಿ

ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್‌ಐನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆಯಲಾಗಿದೆ. ಅದರಲ್ಲಿ ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. 

ಇದೇ ರೀತಿಯ ಬೆದರಿಕೆ ಸಂದೇಶ ಅಕ್ಟೋಬರ್ 25ರಂದು ತಿರುಪತಿಯ ಎರಡು ಪ್ರಸಿದ್ಧ ಹೊಟೇಲ್‌ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖಿಸಲಾಗಿತ್ತು. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಅಲ್ಲಿನವರೇ ಈ ಕೃತ್ಯ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಶಂಕಿಸಿದ್ದಾರೆ. ಇದಲ್ಲದೆ ಈ ಹಿಂದೆಯೂ ಎರಡೂರು ಬಾರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬಗ್ಗೆ ಹುಸಿ ಬೆದರಿಕೆ ಸಂದೇಶ ಬಂದಿತ್ತು.

ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಇಮೇಲ್!

ಬೆಂಗಳೂರು: ನಗರದ ಪ್ರತಿಷ್ಠಿತ ಬಿಷಪ್ ಕಾಟನ್ ಶಾಲೆಯ ವೆಬ್ ಸೈಟ್ ಗೆ  ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.11 ರಂದು ನಡೆದಿತ್ತು. 

ನಿನ್ನೆ ಮತ್ತೆ 50 ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆ ಕಳೆದೆರಡು ವಾರದಲ್ಲಿ ಬಂದ ಬೆದರಿಕೆಗಳ ಸಂಖ್ಯೆ 350!

ಸಂಜೆ 7 ಗಂಟೆ ಸುಮಾರಿಗೆ ಸಂಪಂಗಿರಾಮ ನಗರದ ಐಬಿಎಸ್ ಹೋಟೆಲ್‌ಗೆ ಬೆದರಿಕೆ ಇಮೇಲ್ ಕಳಿಸಿರುವ ಆಗಂತುಕರು. ಹೋಟೆಲ್‌ನಲ್ಲಿ ಎರಡು ಇಡಿ ಗಳನ್ನು ಇಟ್ಟಿದ್ದೇವೆ. ಅದು ಯಾವುದೇ ಸಮಯದಲ್ಲಾದ್ರೂ ಸ್ಫೋಟಗೊಳ್ಳಬಹುದು ಎಂದು ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ಬರುತ್ತಿದ್ದಂತೆ ಎಚ್ಚೆತ್ತ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಡಾಗ್ ಸ್ಕ್ವಾಡ್ ಜೊತೆಗೆ ಸಂಪಂಗಿ ರಾಮನಗರ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದ್ದರು. 

ಬೆದರಿಕೆ ಸಂದೇಶದಲ್ಲಿ ಯಾವ ಸ್ಥಳದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಸ್ಥಳದ ಮಾಹಿತಿ ಉಲ್ಲೇಖಿಸದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೋಟೆಲ್‌ ಎಲ್ಲ ಗ್ರಾಹಕರು, ಸಿಬ್ಬಂದಿ ಖಾಲಿ ಮಾಡಿಸಿದ ಹೋಟೆಲ್ ಸಿಬ್ಬಂದಿ. ಕೆಲಕಾಲ ಆತಂಕ ಸೃಷ್ಟಿಸಿತು. ಪರಿಶೀಲನೆ ಬಳಿಕ ಇದೊಂದು ಹುಸಿಬಾಂಬ್ ಕರೆ ಎಂಬುದು ಪೊಲೀಸ್ ಮೂಲಗಳಿಂದ ಮಾಹಿತಿ. ಒಟ್ಟಿನಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು.

Latest Videos
Follow Us:
Download App:
  • android
  • ios