Asianet Suvarna News Asianet Suvarna News

ವಿಜಯಪುರ: ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ರೇಪ್‌ ಕೇಸ್‌ ಆರೋಪಿ ಆತ್ಮಹತ್ಯೆ

*  ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆ
*  ಶೌಚಾಲಯಕ್ಕೆ ಹೋಗಿದ್ದ ವೇಳೆ ನೇಣಿಗೆ ಶರಣು
*  ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮೃತನ ಸಂಬಂಧಿಕರು 
 

Rape Accused Committs Suicide at Sindagi in Vijayapura grg
Author
Bengaluru, First Published Aug 29, 2021, 2:01 PM IST
  • Facebook
  • Twitter
  • Whatsapp

ವಿಜಯಪುರ(ಆ.29): ಅಪ್ರಾಪ್ತೆ ಮೇಲೆ ಅತ್ಯಾಚಾರ ವೆಸಗಿದ ಪ್ರಕರಣದಡಿ ಬಂಧಿತನಾದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ಇಂದು(ಭಾನುವಾರ) ನಡೆದಿದೆ. ದೇವೇಂದ್ರ ಸಂಗೋಗಿ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದಾನೆ. 

ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಪ್ಯಾಂಟ್‌ ಬಳಸಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ ಆರೋಪದಲ್ಲಿ ದೇವೇಂದ್ರ ಸಂಗೋಗಿ ಅರೆಸ್ಟ್ ಆಗಿದ್ದ. ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿ ಪೋಷಕರು ದೂರು ನೀಡಿದ್ದರು. ಹೀಗಾಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ‌ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದರು.  ಆದರೆ, ಇಂದು ಬೆಳಿಗ್ಗೆ ಶೌಚಾಲಯಕ್ಕೆ ಹೋದ ವೇಳೆ ದೇವೇಂದ್ರ ಸಂಗೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ನ್ಯಾಯಾಧೀಶರ ಎದುರು ಆರೋಪಿಯನ್ನ ಹಾಜರು ಪಡೆಸಬೇಕಿತ್ತು. ಪೊಲೀಸ್‌ ಕಷ್ಟಡಿಯಲ್ಲೇ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ದೇವೇಂದ್ರ ಸಂಗೋಗಿ ಸಂಬಂಧಿಕರು ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. 

ಕೊಪ್ಪಳ: ಶಾಲಾ ಆವರಣದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಭಾನುವಾರ) ಮಾಧ್ಯಮದವರಿಗೆ ಮಾಹಿತಿ ನೀಡಿದ ಎಸ್ಪಿ ಆನಂದಕುಮಾರ್ ಅವರು, ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆತನನ್ನ ಬಂಧಿಸಲಾಗಿತ್ತು. ರಾತ್ರಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಒಳಗಡೆ ನೇಣು ಹಾಕಿಕೊಂಡಿದ್ದಾನೆ. ವಿಷಯ ತಿಳಿದು ಸಿಬ್ಬಂದಿ ಆತನನ್ನ ಸಿಂದಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಅಲ್ಲಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಪ್ರಕರಣವನ್ನ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆ. ಬಳಿಕ ಪ್ರಕರಣ ಸಿಐಡಿಗೆ ನೀಡುವ ಬಗ್ಗೆ ಮೇಲಾಧಿಕಾರಿಗಳು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

Follow Us:
Download App:
  • android
  • ios