38ರ ಯುವತಿಗೆ ಮತ್ತಿನೌಷಧಿ ನೀಡಿ ರೇಪ್: 72 ವರ್ಷದ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಕೇಸ್
ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ರಾಮಚಂದ್ರ ಅವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದರ ಪರಿಣಾಮ ನಾನು ಈಗ ಗರ್ಭಿಣಿಯಾಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅಧಿಕಾರಿಗಳು
ಬೆಂಗಳೂರು(ಡಿ.05): ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 38 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಿವೃತ್ತ ಐಎಎಸ್ ಅಧಿಕಾರಿ ಜಿ.ರಾಮಚಂದ್ರ (72) ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ರಾಮಚಂದ್ರ ಅವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದರ ಪರಿಣಾಮ ನಾನು ಈಗ ಗರ್ಭಿಣಿಯಾಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅತ್ತೆ ಮೇಲೆ ರೇಪ್ ಕೇಸ್ ದಾಖಲಿಸಿದ ಸೊಸೆ: ವಿಚಾರಣೆಗೆ ಸುಪ್ರೀಂ ಸಮ್ಮತಿ
ಸಂತ್ರಸ್ತೆ ವಿರುದ್ಧ ದೂರು:
ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ಅವರು ಸಂತ್ರಸ್ತೆ ವಿರುದ್ಧ ಸೆ.14ರಂದು ತಿಲಕನಗರ ಪೊಲೀಸ್ ಠಾಣೆಗೆ ದೂರು ನೀಡಿ ದ್ದಾರೆ. ಪ್ರಮಿಳಾ (ಹೆಸರು ಬದಲಿಸಲಾಗಿದೆ) ಎಂಬಾಕೆಯನ್ನು ಅನಾರೋಗ್ಯಪೀಡಿತ ಪತ್ನಿಯ ಆರೈಕೆಗಾಗಿ ನೇಮಿಸಿಕೊಂಡಿದ್ದೆ. ಈ ವೇಳೆ ಆಕೆ ತಾನಾಗೆಯೇ ನನ್ನ ಬಳಿ ಬಂದು ಆತ್ಮೀಯವಾಗಿ ನಡೆದುಕೊಳ್ಳುತ್ತಿದ್ದಳು. ನಿಮ್ಮ ಪತ್ನಿಯ ಹಾಗೆ ನಾನೂ ಸಹ ನಿಮ್ಮ ಯೋಗಕ್ಷೇಮ ನೋಡಿಕೊಳ್ಳುವೆ ಎಂದು ನಂಬಿಸಿದ್ದಳು. ಪರಸ್ಪರ ಒಪ್ಪಿಗೆ ಮೇರೆಗೆ ಇಬ್ಬರು ದೈಹಿಕ ಸಂಬಂಧ ಇರಿಸಿಕೊಂಡಿದ್ದೆವು.
ಶಾಲಾ ಬಸ್ ಚಾಲಕನಿಂದಲೇ ಇಬ್ಬರು ನರ್ಸರಿ ಮಕ್ಕಳ ಮೇಲೆ ಅತ್ಯಾಚಾರ
ಕೆಲ ಸಮಯದ ಬಳಿಕ ಆಕೆ ನಾನು ಗರ್ಭಿಣಿಯಾಗಿದ್ದಾನೆ. ನನಗೆ 10 ಕೋಟಿ ರು. ಕೊಡುವಂತೆ ಬೇಡಿಕೆ ಇರಿಸಿದ್ದಳು. ಈಕೆಯ ತಾಯಿ ಮತ್ತು ತಮ್ಮ ಸಹ ನನಗೆ ಹಣಕ್ಕೆ ಬೇಡಿಕೆ ಇರಿಸಿದ್ದರು. ಹೀಗಾಗಿ ವಿವಿಧ ಹಂತಗಳಲ್ಲಿ ಅಕ್ರಮವಾಗಿ ನನ್ನಿಂದ 70 ಲಕ್ಷ ರು. ಹಣ ವಸೂಲಿ ಮಾಡಿದ್ದಾರೆ. ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಮಿಳಾ ಮತ್ತು ಆಕೆಯ ತಾಯಿ ಹಾಗೂ ತಮ್ಮನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.