ವಿಶೇಷ ಚೇತನ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 13 ವರ್ಷ ಶಿಕ್ಷೆ, 35 ಸಾವಿರ ರು. ದಂಡ ವಿಧಿಸಿದ ಕೋರ್ಟ್

ಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ. 

Rape of mentally challenged girl accused sentenced to 13 years jail at Mandya rav

ಮಂಡ್ಯ (ಫೆ.16): ಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ. 

ಸುಭಾಷ್‌ನಗರ (ನೂರಡಿ ರಸ್ತೆ)ದ ಎಂ.ಎಸ್. ಮಹೇಶ್ ಶಿಕ್ಷೆಗೆ ಗುರಿಯಾದ ಆರೋಪಿ.ಕಳೆದ 2022ರಲ್ಲಿ ಆರೋಪಿ ಮಹೇಶ್ 16 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ತನ್ನ ಕಾರಿನಲ್ಲಿ ನಗರದ ಕಲಾಮಂದಿರದ ಹಿಂಭಾಗದ ರಸ್ತೆಗೆ (ಸೆಸ್ಕ್ ಕಚೇರಿಗೆ ಹೋಗುವ ರಸ್ತೆ) ಕರೆದೊಯ್ದು ಅತ್ಯಾಚಾರ ನಡೆಸಿದ್ದನು.

ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್‌

ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿ ಹಾಗೂ ಪೋಷಕರು ದೂರು ನೀಡಿದ್ದರು. ವಿಚಾರಣೆ ನಡೆಸಿದ ಅಂದಿನ ಇನ್ಸ್ ಪೆಕ್ಟರ್ ಎಸ್.ಕೆ. ಕೃಷ್ಣ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಫೋಕ್ಸೋ ಕಾಯ್ದೆಯಡಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಕೊಪ್ಪಳ: ಪತಿಗೆ ಥಳಿಸಿ ವಿವಾಹಿತ ಮಹಿಳೆಯನ್ನ ಎಳೆದೊಯ್ದು ಅತ್ಯಾಚಾರ ನಡೆಸಿದ್ದ ಗ್ಯಾಂಗ್ ಅರೆಸ್ಟ್

ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ. ನಾಗಜ್ಯೋತಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಮಹೇಶ್‌ಗೆ ಕಲಂ 345(2ಇ) ಅಡಿಯಲ್ಲಿನ ಅಪರಾಧಕ್ಕೆ ಒಂದು ವರ್ಷ ಶಿಕ್ಷೆ, 5 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾದಾ ಶಿಕ್ಷೆ ಹಾಗೂ ಕಲಂ 376(2)(ಐ) ಅಡಿಯಲ್ಲಿನ ಅಪರಾಧಕ್ಕೆ 12 ವರ್ಷಗಳ ಶಿಕ್ಷೆ, 30 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು.

Latest Videos
Follow Us:
Download App:
  • android
  • ios