ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 20 ವರ್ಷ ಜೈಲು ಶಿಕ್ಷೆ ನೀಡಿದ ನ್ಯಾಯಾಲಯ
ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಗದಗ (ಜು.17): ಕಳೆದ ಐದು ವರ್ಷಗಳ ಹಿಂದೆ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
ಬಾದಾಮಿ ತಾಲ್ಲೂಕಿನ ಗುಡ್ಡದ ಮಲ್ಲಾಪುರ ಗ್ರಾಮದ ಶಂಕರಗೌಡ ಪಾಟೀಲ ಎಂಬ ಆರೋಪಿ ಕಳೆದ ಐದು ವರ್ಷಗಳ ಹಿಂದೆ ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ದಿನನಿತ್ಯ ಮಾತನಾಡಿಸುತ್ತಾ ಪರಿಚಯ ಮಾಡಿಕೊಂಡಿದ್ದಾನೆ. ನಂತರ, 12 ವರ್ಷದ ಬಾಲಕಿ ಪೋಷಕರೊಂದಿಗೆ ಜಮೀನಿನ ಕಡೆಗೆ ಹೋದಾಗ ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ, ಅಪ್ರಾಪ್ತೆಳೆಂಬುದನ್ನೂ ಮರೆದು ಬಾಲಕಿಯ ಬಾಯಿ ಮುಚ್ಚಿ ಅತ್ಯಾಚಾರ ಮಾಡಿದ್ದಾನೆ. ನಂತರ, ಮನೆಯಲ್ಲಿ ಯಾರಿಗೂ ಹೇಳದಂತೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.
Bengaluru PES College: ಪರೀಕ್ಷೆಯಲ್ಲಿ ಕಾಪಿ ಮಾಡ್ತಿದ್ದ ವಿದ್ಯಾರ್ಥಿಗೆ ಅವಮಾನ: 14ನೇ ಮಹಡಿಯಿಂದ ಬಿದ್ದು ಸಾವು
ರೋಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್: ಬಾಲಕಿಯ ಮೈ ಮೇಲಿದ್ದ ಗಾಯದ ಗುರುತುಗಳನ್ನು ನೋಡಿದ ಪೋಷಕರು ಬಾಲಕಿಯನ್ನು ಕೇಳಿದಾಗ ಬಾಯಿ ಬಿಟ್ಟಿದ್ದಾಳೆ. ಕೂಡಲೇ ಬಾಲಕಿಯನ್ನು ಕರೆದೊಯ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು. ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ರೋಣ ಇನ್‌ಸ್ಪೆಕ್ಟರ್ ಎಂ.ಐ.ನಡುವಿನಮನಿ ಪ್ರಕರಣ ದಾಖಲಿಸಿ, ತನಿಖೆ ನಡೆಸಿ 2019ರ ಸೆಪ್ಟಂಬರ್ 5ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಭೀಮನ ಅಮವಾಸ್ಯೆ: ಪಾದಪೂಜೆ ಮಾಡದೇ ತವರಿನಲ್ಲಿದ್ದ ಪತ್ನಿಯನ್ನು ಕಿಡ್ನಾಪ್ ಮಾಡಿದ ಪತಿರಾಯ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಜೈಲು ಶಿಕ್ಷೆ: ಇನ್ನು ಪೊಲೀಸ್ ಇಲಾಖೆಯ ದೋಷಾರೋಪ ಪಟ್ಟಿಯನ್ನು ಪರಿಶೀಲನೆ ಮಾಡಿದ ನ್ಯಾಯಾಲಯವು, ಶಂಕರಗೌಡ ಪಾಟೀಲನೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಪ್ರಕರಣದ ಸಾಕ್ಷಿ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಅವರು ಆರೋಪಿ ಮಾಡಿದ ಅಪರಾಧ ರುಜುವಾತಾದ ಕಾರಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಮರೇಶ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು.