ಹಾಸನ: ಬುದ್ಧಿಮಾಂಧ್ಯೆ ಮೇಲೆ ಎರಡು ಮಕ್ಕಳ ತಂದೆಯಿಂದ ಅತ್ಯಾಚಾರ
ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಮನೆಯಲ್ಲಿ ಬುದ್ಧಿಮಾಂದ್ಯ ಬಾಲಕಿ ಒಬ್ಬಳೇ ಇದ್ದಳು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಕಾಮುಕ ಚಾಕೊಲೆಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.

ಹಾಸನ(ಫೆ.06): ಬುದ್ಧಿಮಾಂಧ್ಯೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಹೀನಕೃತ್ಯ ನಡೆದಿದೆ.
ಬಾಲಕಿಯ ಪೋಷಕರು ಸಂಬಂಧಿಕರೊಬ್ಬರ ಬೀಗರ ಊಟಕ್ಕೆ ಹೋಗಿದ್ದರು. ಮನೆಯಲ್ಲಿ ಬುದ್ಧಿಮಾಂದ್ಯ ಬಾಲಕಿ ಒಬ್ಬಳೇ ಇದ್ದಳು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಕಾಮುಕ ಚಾಕೊಲೆಟ್ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ರೂ ಆರೋಪಿ ಎರಡು ಮಕ್ಕಳ ತಂದೆ ಏನು ಮಾಡಿಯೇ ಇಲ್ಲ ಎಂಬಂತೆ ಮನೆಯಲ್ಲೇ ಇದ್ದನು. ಸಂಜೆ ವೇಳೆಗೆ ಪೋಷಕರು ಮನೆಗೆ ಬಂದಾಗ ಬಾಲಕಿಯ ವರ್ತನೆ ಬದಲಾಗಿತ್ತು. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಬಿಡದಿಯಲ್ಲಿ ಮನೆಗೆ ನುಗ್ಗಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ!
ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಮನೆಯ ಹಿಂಬಾಗಿಲಿನಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಕೀಚಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.