*   ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದ ಘಟನೆ*   ಇಬ್ಬರನ್ನು ಕಾಮುಕರನ್ನ ಬಂಧಿಸಿದ ಪೊಲೀಸರು *  ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 

ಹಾವೇರಿ(ಜೂ.02): ಅಂಗವಿಕಲ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಡೂರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಾನಗಲ್ಲ ತಾಲ್ಲೂಕಿನ ತಿಳವಳ್ಳಿ ಗ್ರಾಮದಲ್ಲಿ ಯುವತಿಯ ಬಾಯಿಗೆ ಬಟ್ಟೆ ಹಾಕಿ ಅತ್ಯಾಚಾರ ಮಾಡಲಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಧಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ್ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಪರಶುರಾಮನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ಹೈದರಾಬಾದ್: ಪತಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮಹಿಳೆ ಮೇಲೆ ಐವರಿಂದ ರೇಪ್ ಮಾಡಿಸಿ ವಿಡಿಯೋ ಚಿತ್ರೀಕರಿಸಿದ ಪತ್ನಿ

ಯಶವಂತ್ ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದ.‌ ಈಗ ಆರೋಪಿ ಯಶವಂತ್ ಕೂಡ ಪೋಲೀಸರ ಅತಿಥಿಯಾಗಿದ್ದಾನೆ. ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.