ಕಲಬುರಗಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಜೀವ ಬೆದರಿಕೆ

ಆರೋಪಿ ವಿದ್ಯಾರ್ಥಿಯನ್ನು ಪುಸಲಾಯಿಸಿ ಕಾರಿನಲ್ಲಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ್ದಾನೆ. ಈ ವಿಷಯ ಬಾಯಿ ಬಿಟ್ಟರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ. 

Rape on Girl in Kalaburagi grg

ಕಲಬುರಗಿ(ಜು.18):  ಕಾಲೇಜು ವಿದ್ಯಾರ್ಥಿಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ ಘಟನೆ ಫರಹತಾಬಾದ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ವಿದ್ಯಾರ್ಥಿಯನ್ನು ಪುಸಲಾಯಿಸಿ ಕಾರಿನಲ್ಲಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿದ್ದಾನೆ. ಈ ವಿಷಯ ಬಾಯಿ ಬಿಟ್ಟರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ. 

ಗ್ಯಾಂಗ್‌ರೇಪ್‌: ಅಪ್ರಾಪ್ತ ಗೆಳೆಯನೊಂದಿಗೆ ಮನೆ ಬಿಟ್ಟು ಓಡಿ ಬಂದ ಬಾಲಕಿ ಸಿಲುಕಿದ್ದು ಕಾಮುಕರ ಕೈಗೆ

ಈ ಸಂಬಂಧ ನಾನಾಗೌಡ ಬರಮರೆಡ್ಡಿ ಎಂಬಾತನ ವಿರುದ್ಧ ಫರಹತಾಬಾದ ಪೊಲೀಸ್‌ ಠಾಣೆಯಲ್ಲಿ ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ವೀರಣ್ಣ ಉಪ್ಪಿನ್‌ (50) ಆತ್ಮಹತ್ಯೆ ಮಾಡಿಕೊಂಡವರು.

ಕೆಲವು ವರ್ಷಗಳಿಂದ ವೀರಣ್ಣ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಎಲ್ಲಾ ಕಡೆ ತೋರಿಸಿದ್ದರೂ ನೋವು ಕಡಿಮೆಯಾಗಿರಲಿಲ್ಲ. ಜು.12ರಂದು ಪತ್ನಿ ಕೆಲಸಕ್ಕೆ ಹೋದ ವೇಳೆ ಕ್ರಿಮಿನಾಶಕ ಔಷಧ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪತ್ನಿ ಗೌರಮ್ಮ ಉಪ್ಪಿನ್‌ ಸಬ್‌ ಅರ್ಬನ್‌ ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios