ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ
* ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದ ಘಟನೆ
* ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
* ತನಿಖೆ ಆರಂಭಿಸಿದ ಪೊಲೀಸರು
ಉಪ್ಪಿನಂಗಡಿ(ಜೂ.08): ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಿಡುವ ಆಸೆ ತೋರಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ ಕೃತ್ಯಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿಯಾಗಿರುವ 13 ವರ್ಷದ ಬಾಲಕಿಯನ್ನು ನೆರೆಮನೆಯ ಮುನಾಸೀರ್ ಎಂಬಾತ ಕಳೆದ ಮೇ 30 ರಂದು ಶಾಲೆಗೆ ಕರೆದೊಯ್ಯುವೆನೆಂದು ತಿಳಿಸಿ ಕಾರಿನಲ್ಲಿ ಉಪ್ಪಿನಂಗಡಿಯ ಲಾಡ್ಜ್‌ಗೆ ಕರೆದೊಯ್ದು ಐದಾರು ಬಾರಿ ದೈಹಿಕ ಸಂಪರ್ಕ ನಡೆಸಿದ್ದು, ಬಳಿಕ ಜೂ.7ರಂದೂ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆ ತಂದು ಮೂರು ಬಾರಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರವೆಸಗಿದ್ದು, ಜೀವ ಬೆದರಿಕೆ ಒಡ್ಡಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಹಾವೇರಿ: ವಿದ್ಯಾರ್ಥಿನಿ ಮೇಲೆ ಒಂದೂವರೆ ವರ್ಷದಿಂದ ಪ್ರಾಧ್ಯಾಪಕನಿಂದ ರೇಪ್
ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.