ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ, ಕ್ಯಾಂಪ್ ಪ್ರದೇಶ ಉದ್ವಿಗ್ನ
* ಆರೋಪಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದ ಜನರು
* ಕ್ಯಾಂಪ್ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣ
* ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳಗಾವಿ(ಜು.28): ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇರೆಗೆ ಅಪ್ರಾಪ್ತ ಸೇರಿದಂತೆ ಇಬ್ಬರ ವಿರುದ್ಧ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಮುಂಬೈಯಿ ಮೂಲದ ರೋಶನ ಡೆವಿಡ್ (20) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ಯಾಂಪ್ ಪ್ರದೇಶದಲ್ಲಿನ 3 ವರ್ಷ 7 ತಿಂಗಳ ವಯಸ್ಸಿನ ಬಾಲಕಿ ಮೇಲೆ ಈಗ್ಗೆ ಎಂಟಹತ್ತು ದಿನದ ಹಿಂದೆ ಅತ್ಯಾಚಾರ ನಡೆಸಿದ್ದು, ಈ ವಿಷಯ ಬೆಳಕಿಗೆ ಬಂದಿರಲಿಲ್ಲ. ಆದರೆ ಬಾಲಕಿಯ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಚಿಕಿತ್ಸೆಗಾಗಿ ವೈದ್ಯರ ಹತ್ತಿರ ಹೋದ ಸಂದರ್ಭದಲ್ಲಿ ಅತ್ಯಾಚಾರ ನಡೆದಿರುವ ವಿಷಯ ತಿಳಿದು ಬಂದಿದೆ.
9 ತಿಂಗಳ ಕೂಸಿನ ಮೇಲೆ ಅತ್ಯಾಚಾರ ಎಸಗಿದ ಪಕ್ಕದ ಮನೆ ಕಿರಾತಕ
ಬಾಲಕಿಯೊಂದಿಗೆ ತಾಯಿಯೊಬ್ಬಳೆ ಇರುವುದನ್ನು ಕಂಡ ಆರೋಪಿಗಳು ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ವಿಷಯ ಗೊತ್ತಾಗಿ ಬಾಲಕಿ ಸಂಬಂಧಿಕರು, ಬಾಲಕಿ ಮನೆಗೆ ಆಗಮಿಸಿ ಅಪ್ರಾಪ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಪ್ರಾಪ್ತ ಆರೋಪಿಯು ಮತ್ತೋರ್ವ ಆರೋಪಿ ರೋಶನ ಡೆವಿಡ್ ಕೃತ್ಯ ಎಸಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಸುತ್ತಮುತ್ತಲಿನ ಜನರಿಗೆ ಗೊತ್ತಾಗುತ್ತಿದ್ದಂತೆ ಆರೋಪಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಎರಡು ಕುಟುಂಬಸ್ಥರ ನಡುವೆ ಮಾರಾಮಾರಿ ನಡೆದಿದ್ದು, ಇದರಿಂದ ಆತಂಕಗೊಂಡ ಕ್ಯಾಂಪ್ ಪ್ರದೇಶದ ಜನರು ಹಾಗೂ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದಾಗಿದ್ದವು. ಅಲ್ಲದೇ ಕ್ಯಾಂಪ್ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕ್ಯಾಂಪ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.