Asianet Suvarna News Asianet Suvarna News

ರೇಪ್‌ ಸಂತ್ರಸ್ತೆಯನ್ನೇ ಮದುವೆಯಾದ ‘ಅತ್ಯಾಚಾರಿ’ ಬಚಾವ್‌..!

ಆರೋಪಿ ವಿರುದ್ಧ ಕೇಸು, ವಿಚಾರಣೆ ರದ್ದು ಮಾಡಿದ ಹೈಕೋರ್ಟ್‌, 2 ವರ್ಷದ ಹಿಂದೆಯೇ ಮದುವೆಯಾಗಿದ್ದ ಆರೋಪಿ-ಸಂತ್ರಸ್ತೆ

Rapist Who Married the Rape Victim in Karnataka grg
Author
Bengaluru, First Published Aug 25, 2022, 12:30 AM IST

ಬೆಂಗಳೂರು(ಆ.25):  ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪ ಕುರಿತ ಪ್ರಕರಣದಲ್ಲಿ ಆರೋಪಿಯನ್ನೇ ಸಂತ್ರಸ್ತೆ ಮದುವೆಯಾದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. 17 ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರದ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿಮತ್ತು ಪ್ರಕರಣ ಕುರಿತ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ 23 ವರ್ಷದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಅರ್ಜಿದಾರ (ಆರೋಪಿ) ಮೇಲಿದೆ. ಆದರೆ, ಅರ್ಜಿದಾರ ಮತ್ತು ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಸಂತ್ರಸ್ತೆಗೆ 18 ವರ್ಷ ತುಂಬಿದ ಮೇಲೆ ಆಕೆ ಆರೋಪಿಯನ್ನು ಸ್ವ ಇಚ್ಛೆ ಮೇರೆಗೆ ಮದುವೆಯಾಗಿದ್ದಾರೆ. ಮದುವೆ ನಂತರ ಒಂದು ವರ್ಷದ ಬಳಿಕ ದಂಪತಿಗೆ ಮಗು ಜನಿಸಿದೆ. ಸದ್ಯ ಆಕೆ ಅರ್ಜಿದಾರನೊಂದಿಗೆ ವಾಸವಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪಿ ವಿರುದ್ಧದ ಪ್ರಕರಣ ಮುಂದುವರಿಯವುದು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟನ್ಯಾಯಪೀಠ, ಅರ್ಜಿದಾರನ ವಿರುದ್ಧದ ಅಧೀನ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆಗೆ ತಳ್ಳಿದ ಪ್ರಿಯಕರ, ನಂತರ ಗ್ಯಾಂಗ್‌ರೇಪ್‌

ಸಂತ್ರಸ್ತೆಯ ತಂದೆ ತನ್ನ 17 ವರ್ಷದ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿ 2019ರ ಮಾಚ್‌ರ್‍ನಲ್ಲಿ ಬನ್ನೇರುಘಟ್ಟಠಾಣಾ ಪೋಲೀಸರಿಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು, ಅರ್ಜಿದಾರನ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಪೋಕ್ಸೋ ಕಾಯ್ದೆಯಡಿ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2022ರ ಜುಲೈನಲ್ಲಿ ಅರ್ಜಿದಾರ ಹೈಕೋರ್ಚ್‌ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್‌, ಆರೋಪಿ ಹಾಗೂ ತಾನು ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳಸಿರುವುದಾಗಿ ಸಂತ್ರಸ್ತೆಯೇ 2019ರ ಅಕ್ಟೋಬರ್‌ನಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದಾರೆ. 2020ರ ಮಾರ್ಚ್‌ನಲ್ಲಿ ಸಂತ್ರಸ್ತೆಗೆ 18 ವರ್ಷದ ತುಂಬಿದೆ. 2020ರ ಜೂನ್‌ ನಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ ಸಂತ್ರಸ್ತೆ, ತಾನು ಹಾಗೂ ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದೆವು. ಸಮ್ಮತಿಯಿಂದಲೇ ಲೈಂಗಿಕ ಸಂಪರ್ಕ ಬೆಳೆಸಿದೆವು ಎಂದು ಹೇಳಿಕೆ ನೀಡಿದ್ದರು. ಅದನ್ನು ಆಧರಿಸಿಯೇ ವಿಚಾರಣಾ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿತ್ತು ಎಂದು ಆದೇಶದಲ್ಲಿ ತಿಳಿಸಿದೆ.

ಸಂತ್ರಸ್ತೆಯು 2020ರ ಅಕ್ಟೋಬರ್‌ನಲ್ಲಿ ಆರೋಪಿಯನ್ನು ಮದುವೆಯಾಗಿದ್ದಾರೆ. ಅದೇ ದಿನ ಅವರ ಮದುವೆ ನೋಂದಣಿಯಾಗಿದೆ. 2021ರ ಡಿಸೆಂಬರ್‌ನಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಾಗಾಗಿ, ಅರ್ಜಿದಾರನ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ಮುಂದುವರಿಸಿವುದು ಅರ್ಥಹೀನ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತು.
 

Follow Us:
Download App:
  • android
  • ios