Asianet Suvarna News Asianet Suvarna News

ಬೆಂಗಳೂರು: ಬೈಕ್‌ ವ್ಹೀಲಿಂಗ್‌ ಪುಂಡರಿಗೆ ಸಂಚಾರ ಪೊಲೀಸರ ಚಾಟಿ

2023ರ ಸೆಪ್ಟೆಂಬರ್‌ನಿಂದ ಫೆಬ್ರವರಿ 27ರ ವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ 46 ದ್ವಿಚಕ್ರ ವಾಹನ ವ್ಹೀಲಿಂಗ್‌ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 34 ಮಂದಿ ವಯಸ್ಕರು ಹಾಗೂ 12 ಮಂದಿ ಅಪ್ರಾಪ್ತರಾಗಿದ್ದಾರೆ. 46 ಪ್ರಕರಣಗಳ ಪೈಕಿ 30 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು ಅಮಾನತುಪಡಿಸಲು ಸಾರಿಗೆ ಇಲಾಖೆಗೆ ಕಳುಹಿಸಲಾಗಿತ್ತು. ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು 3 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ. 

RC suspension Who Bike Wheeling in Bengaluru grg
Author
First Published Feb 28, 2024, 8:52 AM IST

ಬೆಂಗಳೂರು(ಫೆ.28):  ನಗರದ ಸಂಚಾರ ಪೂರ್ವ ವಿಭಾಗ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಸಂಬಂಧ 46 ಪ್ರಕರಣ ದಾಖಲಿಸಿದ್ದು, ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು (ಆರ್‌ಸಿ)ಗಳನ್ನು 3 ತಿಂಗಳ ಅವಧಿಗೆ ಸಾರಿಗೆ ಇಲಾಖೆ ಅಮಾನತುಗೊಳಿಸಿದೆ.

2023ರ ಸೆಪ್ಟೆಂಬರ್‌ನಿಂದ ಫೆಬ್ರವರಿ 27ರ ವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ 46 ದ್ವಿಚಕ್ರ ವಾಹನ ವ್ಹೀಲಿಂಗ್‌ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 34 ಮಂದಿ ವಯಸ್ಕರು ಹಾಗೂ 12 ಮಂದಿ ಅಪ್ರಾಪ್ತರಾಗಿದ್ದಾರೆ. 46 ಪ್ರಕರಣಗಳ ಪೈಕಿ 30 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು ಅಮಾನತುಪಡಿಸಲು ಸಾರಿಗೆ ಇಲಾಖೆಗೆ ಕಳುಹಿಸಲಾಗಿತ್ತು. ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು 3 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ. 

Wheeling : ಬೆಂಗಳೂರಿನಲ್ಲಿ ವ್ಹೀಲಿಂಗ್‌ ಹುಚ್ಚಾಟ: ಡಿಸಿಪಿ ಆಫೀಸ್‌ ಮುಂಭಾಗದಲ್ಲೇ ಯುವಕರ ಪುಂಡಾಟ

ಉಳಿದ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು ಅಮಾನತುಗೊಳಿಸುವ ಸಂಬಂಧ ಆರ್‌ಟಿಒ ಕಚೇರಿಗಳಿಗೆ ಪತ್ರ ವ್ಯವಹಾರ ಮಾಡಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

Follow Us:
Download App:
  • android
  • ios