Asianet Suvarna News Asianet Suvarna News

ಮದುವೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮೇಲೆ ಕುದಿವ ನೀರು ಹಾಕಿದ ಪ್ರಿಯತಮೆ!

ಬೇರೆ ಹುಡುಗಿ ಜತೆ ಮದುವೆಯಾದ ಎಂಬ ಕಾರಣಕ್ಕೆ ಕೋಪಗೊಂಡ ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಮಹಿಳೆ ಗಾಢ ನಿದ್ದೆಯಲ್ಲಿದ್ದ ಪ್ರಿಯಕರನ ಮೇಲೆ ಕುದಿಯುವ ನೀರು ಸುರಿದು ಬಿಯರ್‌ ಬಾಟಲಿಯಿಂದ ಆತನ ಮುಖಕ್ಕೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Refusal to marry: The young woman who threw boiling water in afzalapur at kalaburagi rav
Author
First Published May 30, 2023, 11:36 PM IST

ಬೆಂಗಳೂರು (ಮೇ.30) : ಬೇರೆ ಹುಡುಗಿ ಜತೆ ಮದುವೆಯಾದ ಎಂಬ ಕಾರಣಕ್ಕೆ ಕೋಪಗೊಂಡ ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಮಹಿಳೆ ಗಾಢ ನಿದ್ದೆಯಲ್ಲಿದ್ದ ಪ್ರಿಯಕರನ ಮೇಲೆ ಕುದಿಯುವ ನೀರು ಸುರಿದು ಬಿಯರ್‌ ಬಾಟಲಿಯಿಂದ ಆತನ ಮುಖಕ್ಕೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಬೊಮ್ಮಸಂದ್ರ ಬಳಿಯ ಹೆರಾಂಡಳ್ಳಿ ನಿವಾಸಿ ವಿಜಯಶಂಕರ ಭೀಮಾಶಂಕರ(Vijayashankar Bhimashankar) ಆರ್ಯ(30) ಗಾಯಗೊಂಡವರು. ಮೇ 26ರಂದು ಮುಂಜಾನೆ 5 ಗಂಟೆ ಸುಮಾರಿಗೆ ಚಾಮರಾಜಪೇಟೆಯ ಎಂಡಿ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಶೇ.50ರಷ್ಟುಸುಟ್ಟಗಾಯಗಳಾಗಿರುವ ವಿಜಯ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಜ್ಯೋತಿ ದೊಡ್ಡಮನಿ ಎಂಬಾಕೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀ​ಸ​ರು ತಿಳಿಸಿದ್ದಾರೆ.

ಮದುವೆ ಸಿದ್ಧತೆಯಲ್ಲಿದ್ದ ಮದುಮಗ ಶವವಾಗಿ ಪತ್ತೆ: ಮದುವೆಯಾಗಿಲ್ಲವೆಂದು ಅಂಗವಿಕಲ ಆತ್ಮಹತ್ಯೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

 ವಿಜಯಪುರ (ಮೇ.30) : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ .16 ಸಾವಿರ ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ತೀಪುÜರ್‍ ನೀಡಿದೆ.

ಇಂಡಿ ತಾಲೂಕಿನ ತಡವಲಗಾ ಗ್ರಾಮದ ಅರ್ಜುನ ಹನಮಂತ ಕ್ಷತ್ರಿ (23) ಶಿಕ್ಷೆಗೀಡಾದ ವ್ಯಕ್ತಿ.

16 ವರ್ಷದ ಬಾಲಕಿ ಇಂಡಿ ಪಟ್ಟಣದಲ್ಲಿದ್ದ ಶಾಲಾ ಪಂದ್ಯಾಟ ಮುಗಿಸಿಕೊಂಡು ತನ್ನ ವಸತಿ ಕಡೆಗೆ ನಡೆದುಕೊಂಡು ಹೊರಟಿದ್ದಳು. ಆಗ ಆರೋಪಿ ಆಕೆಯನ್ನು ಅಡ್ಡಗಟ್ಟಿಲಿಂಬೆ ಪಡಕ್ಕೆ ಕರೆದೊಯ್ದು ದೌರ್ಜನ್ಯ ಎಸಗಿದ್ದ. ಬಳಿಕ ಈ ವಿಷಯವನ್ನು ಮನೆಯಲ್ಲಿ ಹೇಳಿದರೆ, ನಿಮ್ಮ ಕುಟುಂಬ ಸದಸ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ, ಬಾಲಕಿ ತನ್ನ ತಂದೆ-ತಾಯಿಗಳಿಗೆ ಈ ವಿಷಯ ತಿಳಿಸಿರಲಿಲ್ಲ. ಬಾಲಕಿಯ ಈ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡ ಆರೋಪಿ, ಆಕೆ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಖಾತ್ರಿ ಪಡಿಸಿಕೊಂಡು ಮತ್ತೆ ಮತ್ತೆ ದೌರ್ಜನ್ಯ ಎಸಗುತ್ತಿದ್ದ. ಬಾಲಕಿ ಗರ್ಭಿಣಿ ಆದಾಗಲೇ ತಂದೆ-ತಾಯಿಗೆ ನೈಜ ವಿಷಯ ಗೊತ್ತಾಗಿದೆ. ತಕ್ಷಣ ಪೋಷಕರು ಈ ಬಗ್ಗೆ ಹೊರ್ತಿ ಠಾಣೆಗೆ ದೂರು ಸಲ್ಲಿಸಿದರು.

ಸೊರಬ: 16 ವರ್ಷಗಳಿಂದ ಪಾಳುಬಿದ್ದಿರೋ ಶೌಚಾಲಯ ಅಕ್ರಮ ಚಟುವಟಿಕೆಗಳ ತಾಣ!

ನಂತರ ನೊಂದ ಬಾಲಕಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹೊರ್ತಿ ಠಾಣೆ ಪೊಲೀಸರು, ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಸಲ್ಲಿಸಿದ್ದರು.

ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ ಅವರು, ಪ್ರಕರಣದಲ್ಲಿಯ ಸಾಕ್ಷ್ಯಾಧಾರಗಳು ರುಜುವಾತಾಗಿವೆ ಎಂದು ತೀರ್ಮಾನಿಸಿ, ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ .26 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗುಂಡ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

Follow Us:
Download App:
  • android
  • ios