Asianet Suvarna News Asianet Suvarna News

Bengaluru Crime News: ನಿವೃತ್ತ ಶಿಕ್ಷಕಿಯ ಬರ್ಬರ ಹತ್ಯೆ: ಆಸ್ತಿ ವಿಚಾರಕ್ಕೆ ಕೊಲೆ?

Crime News: ನಿವೃತ್ತ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. 

Retired lady teacher murdered in Bangalore police probe on mnj
Author
First Published Sep 9, 2022, 4:00 PM IST

ಬೆಂಗಳೂರು (ಸೆ. 09): ನಿವೃತ್ತ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.  ಉಸಿರುಗಟ್ಟಿಸಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು ನಿನ್ನೆ ತಡರಾತ್ರಿ‌ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.  ಪ್ರಸನ್ನ ಕುಮಾರಿ(60) ಕೊಲೆಯಾದ ವೃದ್ಧೆ. ವೃದ್ಧೆಯನ್ನು ಕೈಕಾಲು ಕಟ್ಟಿ, ಉಸಿರುಗಟ್ಟಿಸಿ ಕೊಲೆಗೈದ ಕಿರಾತಕರು ಚಿನ್ನಾಭರಣ ಹೊತ್ತೊಯ್ದಿದ್ದಾರೆ.  ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 

ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಶಿಕ್ಷಕಿಯಾಗಿದ್ದರು.  ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದರು. ಪ್ರಸನ್ನಕುಮಾರಿ ಒಂಟಿಯಾಗಿ ಜೀವನವನ್ನ ಸಾಗಿಸುತ್ತಿದ್ದು ನಿನ್ನೆ ಸಂಜೆಯ ಸಮಯದಲ್ಲಿ ಆಗಂತುಕರು ಮನೆಗೆ ಬಂದು ಕೊಲೆಗೈದಿದ್ದಾರೆ ಎನ್ನಲಾಗಿದೆ.  ಇಬ್ಬರು ಆಗಂತುಕರು ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. 

ಎಣ್ಣೆ ಮತ್ತಲ್ಲಿ ಮೊಮ್ಮಗನ ರಹಸ್ಯ ಬಾಯ್ಬಿಟ್ಟ ಸ್ನೇಹಿತರು, 8 ತಿಂಗಳ ಬಳಿಕ ತಾತನ ಕೊಲೆ ರಹಸ್ಯ ಬೆಳಕಿಗೆ

ಶ್ರೀರಂಗಪಟ್ಟಣ: ವೃದ್ಧೆ ಕೊಲೆಗೈದು ಚಿನ್ನದ ಸರ ಕಿತ್ತು ಪರಾರಿ: ಒಂಟಿ ವೃದ್ಧ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಚಿನ್ನದ ಸರ ಕಿತ್ತು ಪರಾರಿಯಾಗಿರುವ ಘಟನೆ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೊಟೆಮಾಳದಲ್ಲಿ ಒಂಟಿಯಾಗಿ ವಾಸವಾಗಿದ್ದ ಮಂಗಳಮ್ಮ (75) ಕೊಲೆಯಾದವರು. ರಾತ್ರಿ 9 ಘಂಟೆ ಸಮಯದಲ್ಲಿ ಮೊಮ್ಮಗ ರಾಘು ಅಜ್ಜಿಗೆ ಊಟ ಕೊಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವೃದ್ಧೆ ಮಹಿಳೆ ಮಂಗಳಮ್ಮ ಹಲವು ವರ್ಷಗಳಿಂದ ಒಂಟಿಯಾಗಿ ವಾಸಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಸಂಬಂಧ ಕೆ.ಆರ್‌.ಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios