ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳ: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ
ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೈಸೂರು (ಜು.10): ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮ ಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ವೇಣುಗೋಪಾಲ್‌ನ ಹತ್ಯೆ ನಡೆಸಿದ್ದಾರೆ. ಟಿ. ನರಸೀಪುರ ಪಟ್ಟಣದ ಶ್ರೀರಾಂಪುರ ಕಲೋನಿಯ ನಿವಾಸಿಯಾಗಿದ್ದ ವೇಣುಗೋಪಾಲ್ ಯುವಬ್ರಿಗೇಡ್‌ನ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದೀಗ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಟಿ. ನರಸೀಪುರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಈವರೆಗೆ ದೂರು ದಾಖಲಾಗದೇ ಕೊಲೆಯ ಪ್ರಮುಖ ಮೂರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಜೊತೆಗೆ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿ ಮೃತ ಯುವಕನ ಅಂತಿಮ ದರ್ಶನ ಪಡೆದು, ಬಳಿಕ ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಹೊಸ ಸಿಮ್‌ಕಾರ್ಡ್ ಆಕ್ಟಿವ್ ಆದ ಗಂಟೆಯಲ್ಲೇ 2.5 ಲಕ್ಷ ವಂಚನೆ: ಎಫ್‌ಐಆರ್ ದಾಖಲು
ಮಾವನೂರಲ್ಲಿ ದಂಪತಿ ಕೊಲೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದಂಪತಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಸಮೀಪದ ಮಾವನೂರ ಗ್ರಾಮದಲ್ಲಿ ಜೋಡಿ ಕೊಲೆ ನಡೆದಿದ್ದು, ಗ್ರಾಮದ ಗಜೇಂದ್ರ ಈರಪ್ಪಾ ಹುನ್ನೂರಿ (60) ಮತ್ತು ಪತ್ನಿ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ (45) ಕೊಲೆಗೀಡಾದವರು. ಶುಕ್ರವಾರ ಅಥವಾ ಶನಿವಾರದೊಳಗೆ ಹತ್ಯೆಗೈಯ್ಯಲಾಗಿದೆ ಎಂದು ಶಂಕಿಸಲಾಗಿದೆ. ಹಂತಕರು ದಂಪತಿಯ ತಲೆ ಮತ್ತು ಮುಖಕ್ಕ ಹೊಡೆದು ಕೊಲೆ ಮಾಡಿದ್ದಾರೆ. ಇವರು ಒಬ್ಬಳೇ ಮಗಳು ತೇಜಸ್ವಿನಿ ಗಜಾನನ ನಾವಲಗಟ್ಟಿಬೆಂಗಳೂರಿನಲ್ಲಿದ್ದು, ಸುದ್ದಿ ತಿಳಿದು ಭಾನುವಾರ ಧಾವಿಸಿ ಯಮಕನಮರಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಾರಿ ಅದ್ದೂರಿಯಾಗಿ ನಡೆಯುತ್ತಾ ಮಹಿಷಾ ದಸರಾ?: ಸುಳಿವು ನೀಡಿದ ಸಚಿವ ಮಹದೇವಪ್ಪ
ಮನೆಯಲ್ಲಿ ದಂಪತಿ ಬಿಟ್ಟರೆ ಬೇರೆ ಯಾರೂ ಇರಲಿಲ್ಲ. ಈ ಜೋಡಿ ಕೊಲೆ ಸಂಶಯಾಸ್ಪದವಾಗಿದ್ದು, ಆಸ್ತಿಗಾಗಿ ಅಥವಾ ಅನ್ಯ ಕಾರಣಗಳಿಗಾಗಿ ಕೊಲೆಯಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ಎಂ.ವೇಣುಗೋಪಾಲ ಮಾರ್ಗದರ್ಶನದಲ್ಲಿ ಪೊಲೀಸರು ಕೆಲ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ನಿಗೂಢ ಕೊಲೆ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ವೇಣುಕೊಪಾಲ, ಪಿಐ ರಮೇಶ ಛಾಯಾಗೋಳ, ಪಿಎಸ್‌ಐ ಯಮನಪ್ಪಾ ಮಾಂಗ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.