Asianet Suvarna News Asianet Suvarna News

ದಟ್ಟ ಮಂಜಿನಿಂದ ಭೀಕರ ರಸ್ತೆ ಅಪಘಾತ ; ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ!

ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

Road accident 2 dies in Eshwarahalli at hassan rav
Author
First Published Feb 1, 2024, 1:27 PM IST

ಹಾಸನ (ಫೆ.1): ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಪ್ರದೀಪ್ (30), ಗುರು (25) ಸ್ಥಳದಲ್ಲೇ ಸಾವಿಗೀಡಾದವರು. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಟಿಂಬರ್ ತುಂಬಿದ್ದ ಲಾರಿ ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿತ್ತು. ಮುಂಜಾನೆ ವಾತಾವರಣದಲ್ಲಿ ಸಂಪೂರ್ಣವಾಗಿ ಮಂಜು ಆವರಿಸಿದ್ದ ಪರಿಣಾಮ ರಸ್ತೆಯಲ್ಲಿ ಸಾಗುವವರಿಗೆ ಮುಂದಿನ ವಾಹನಗಳು ಕಾಣದಂತಹ ಪರಿಸ್ಥಿತಿ ಇತ್ತು.

ಹೀಗಾಗಿ ಕಾರಿನಲ್ಲಿದ್ದವರಿಗೆ ಲಾರಿ ನಿಂತಿದ್ದುದು ಗೊತ್ತಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿಬಿದ್ದಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೋಟೆಲ್ ಒಂದರ ಪೂಜೆಗಾಗಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಪರಿಹಾರ ಕೊಡೋದು ವಿಮಾ ಕಂಪನಿಯದ್ದೇ ಹೊಣೆ: ಹೈಕೋರ್ಟ್

Follow Us:
Download App:
  • android
  • ios