ಪುಣ್ಯಸ್ನಾನಕ್ಕೆ ತೆರಳಿದ ಭಕ್ತರ ಟ್ರಾಕ್ಟರ್ ಅಪಘಾತ, ಮಕ್ಕಳು-ಮಹಿಳೆಯರು ಸೇರಿ 22 ಸಾವು!
ದೇವರ ದರ್ಶನಕ್ಕಾಗಿ ಗಂಗಾ ಪುಣ್ಯಸ್ನಾನಕ್ಕೆ ತೆರಳಿದ್ದ ಭಕ್ತರ ಟ್ರಾಕ್ಟರ್ ಪಲ್ಟಿಯಾಗಿ ಕೆರೆಗೆ ಬಿದ್ದ ಭೀಕರ ಘಟನೆ ನಡೆದಿದೆ. ಮಹಿಳೆ, ಮಕ್ಕಳು ಸೇರಿದಂತೆ ಬರೋಬ್ಬರಿ 22 ಮಂದಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕಾಸಗಂಜ್(ಫೆ.24) ಗಂಗಾ ಸ್ನಾನ, ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ತೆರಳಿದ್ದ ಭಕ್ತರಿದ್ದ ಟ್ರಾಕ್ಟರ್ ಅಪಘಾತಕ್ಕೀಡಾಗಿದೆ. ಉತ್ತರ ಪ್ರದೇಶದ ಕಾದರ್‌ಗಂಜ್‌ಗೆ ತೆರಳುತ್ತಿದ್ದ ವೇಳೆ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆರೆಗೆ ಮಗುಚಿ ಬಿದ್ದಿದೆ. ಈ ಅಪಘಾತದಲ್ಲಿ ಮಕ್ಕಳು, ಮಹಿಳೆಯರು ಸೇರಿ 22 ಮಂದಿ ಮೃತಪಟ್ಟಿದ್ದಾರೆ. ಇನ್ನು ಹಲವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರಾಕ್ಟರ್‌ನಲ್ಲಿ ಭಕ್ತರನ್ನು ತುಂಬಿ ಕದರ್‌ಗಂಜ್ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಟ್ರಾಕ್ಟರ್‌ನಲ್ಲಿ ಅತೀ ಹೆಚ್ಚಿನ ಭಕ್ತರನ್ನು ತುಂಬಿಸಲಾಗಿತ್ತು. ಹೀಗಾಗಿ ಅಪಘಾತದ ಪರಿಣಾಮವೂ ತೀವ್ರಗೊಂಡಿದೆ. ಚಲಿಸುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಕೆಳಗಿದ್ದ ದೊಡ್ಡ ಕೆರೆಗೆ ಬಿದ್ದಿದೆ. ಈ ಅಪಘಾತದದಲ್ಲಿ ರಭಸಕ್ಕೆ 22 ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಅಗ್ನಿ ಅವಘಡ; ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ 29 ಆಟೋಗಳು!
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಿಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಇತ್ತ ಅಪಘಾತದಲ್ಲಿ ಮೃತಪಟ್ಟ ಕಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇನ್ನು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕಾಸಗಂಜ್ ಜಿಲ್ಲೆಯಲ್ಲಿ ನಡೆಸಿದ ಅಪಘಾತ ಮಾಹಿತಿ ತಿಳಿದು ನೋವಾಗಿದೆ. ಈ ಸಾವು ಹೃದಯ ವಿದ್ರಾಕವಾಗಿದೆ. ಅಗಲಿದ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿದ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀರಾಮನಲ್ಲಿ ಪಾರ್ಥಿಸುತ್ತೇನೆ ಎಂದು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ಪಲ್ಟಿಯಾದ ಟ್ರಾಕ್ಟರ್ ನೇರವಾಗಿ ಅತೀ ದೊಡ್ಡ ಕೆರೆಗೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಹಲವರು ಕೆರೆಯಿಂದ ಹೊರತೆಗೆಯುವಷ್ಟರಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬೆನ್ನಲ್ಲೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಮಾಹಿತಿ ತಿಳಿದಿ ಪೊಲೀಸರು, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಜೆಸಿಬಿ ಮೂಲಕ ರಕ್ಷಣಾ ಕಾರ್ಯ ಆರಂಭಿಸಿತು. ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ.
ದುಬೈ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ದುರ್ಮರಣ!
ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕತ್ಸೆ ನೀಡಲಾಗುತ್ತಿದೆ. ಇತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರ ವಿಚಾರಣೆ ನಡೆಸಿದ್ದಾರೆ. ಇಷ್ಟೇ ಅಲ್ಲ ಲಭ್ಯವಿರುವ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ.